Exodus 2:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇನ್ನೂ ಹೆಚ್ಚು ಕಾಲ ಬಚ್ಚಿಡಲಾಗದೆ ಆಕೆ ಒಂದು ಬುಟ್ಟಿಯನ್ನು ಮಾಡಿ ಅದಕ್ಕೆ ರಾಳವನ್ನು ಹಚ್ಚಿದಳು. ಆಕೆ ಮಗುವನ್ನು ಬುಟ್ಟಿಯಲ್ಲಿಟ್ಟು ಆ ಬುಟ್ಟಿಯನ್ನು ನೀರಿನಲ್ಲಿ ಎತ್ತರವಾಗಿ ಬೆಳೆದ ಹುಲ್ಲಿನಲ್ಲಿ ಇಟ್ಟಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆ ಅದನ್ನು ಇನ್ನು ಹೆಚ್ಚುಕಾಲ ಮರೆಮಾಡಲಾಗದೆ, ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನು ಹಚ್ಚಿ, ಕೂಸನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿ ಇಟ್ಟಳು.
Kannada BSI Bible 2016
ಅವನನ್ನು ಇನ್ನು ಬಚ್ಚಿಡುವದಕ್ಕಾಗದೆ ಇದ್ದಾಗ ಅವನಿಗಾಗಿ ಆಪಿನ ಪೆಟ್ಟಿಗೆ ಯನ್ನು ತಕ್ಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಇಟ್ಟು ನದಿಯ ಅಂಚಿನಲ್ಲಿ ಇದ್ದ ಹುಲ್ಲಿನಲ್ಲಿ ಇಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆ ಅದನ್ನು ಇನ್ನು ಹೆಚ್ಚು ಕಾಲ ಮರೆಮಾಡಲಾರದೆ ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಮಲಗಿಸಿ ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿಟ್ಟಳು.
Kannada Bible (KNCL) BSI 2016
ಆದರೆ ಹೆಚ್ಚು ಕಾಲ ಮರೆಮಾಡಲಾಗಲಿಲ್ಲ. ಎಂತಲೆ ಆಕೆ ಆಪಿನ ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಜೇಡಿ ಮಣ್ಣನ್ನೂ ರಾಳವನ್ನೂ ಅದಕ್ಕೆ ಮೆತ್ತಿ, ಮಗುವನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿದ್ದ ಜಂಬು ಹುಲ್ಲಿನ ನಡುವೆ ಇಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅದನ್ನು ಹೆಚ್ಚುಕಾಲ ಬಚ್ಚಿಡುವುದಕ್ಕಾಗದೆ ಇದ್ದಾಗ, ಅವನಿಗಾಗಿ ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು, ಜೇಡಿಮಣ್ಣನ್ನು ಮತ್ತು ರಾಳವನ್ನು ಹಚ್ಚಿ, ಕೂಸನ್ನು ಅದರಲ್ಲಿಟ್ಟು, ನೈಲ್ ನದಿಯ ಅಂಚಿನಲ್ಲಿ ಇದ್ದ ಜಂಬು ಹುಲ್ಲಿನಲ್ಲಿ ಇಟ್ಟರು.