Exodus 2:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದೇ ಸಮಯದಲ್ಲಿ ಫರೋಹನ ಮಗಳು ಸ್ನಾನ ಮಾಡುವುದಕ್ಕೆ ನದಿಗೆ ಹೋದಳು. ಆಕೆಯ ಸೇವಕಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಎತ್ತರವಾದ ಹುಲ್ಲಿನ ಮೇಲಿದ್ದ ಬುಟ್ಟಿಯನ್ನು ನೋಡಿ ತನ್ನ ಸೇವಕಿಯರಲ್ಲಿ ಒಬ್ಬಳಿಗೆ, “ಹೋಗಿ ಅದನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟರಲ್ಲಿ ಫರೋಹನ ಮಗಳು ಸ್ನಾನಕ್ಕಾಗಿ ನೈಲ್ ನದಿಯ ಬಳಿಗೆ ಬಂದಳು. ಆಕೆಯ ಸೇವಕಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಜಂಬುಹುಲ್ಲಿನ ಪೆಟ್ಟಿಗೆಯನ್ನು ಕಂಡು, ದಾಸಿಯೊಬ್ಬಳನ್ನು ಕಳುಹಿಸಿ ಅದನ್ನು ತರಿಸಿದಳು.
Kannada BSI Bible 2016
ಆಗ ಫರೋಹನ ಮಗಳು ನದಿಯಲ್ಲಿ ಸ್ನಾನ ಮಾಡುವದಕ್ಕೆ ಇಳಿದು ಬಂದಳು; ಆಕೆಯ ದಾಸಿಯರು ನದಿಯ ಅಂಚಿನಲ್ಲಿ ತಿರುಗಾಡುತ್ತಿದ್ದರು. ಫರೋಹನ ಮಗಳು ಹುಲ್ಲಿನಲ್ಲಿದ್ದ ಪೆಟ್ಟಿಗೆಯನ್ನು ನೋಡಿ ತನ್ನ ದಾಸಿಯನ್ನು ಕಳುಹಿಸಿ ಅದನ್ನು ತರಿಸಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟರಲ್ಲಿ ಫರೋಹನ ಕುಮಾರ್ತೆಯು ಸ್ನಾನಕ್ಕಾಗಿ ಆ ನದಿಯ ಬಳಿಗೆ ಇಳಿದು ಬಂದಳು; ಆಕೆಯ ಗೆಳತಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಜಂಬುಹುಲ್ಲಿನಲ್ಲಿ ಪೆಟ್ಟಿಗೆಯನ್ನು ಕಂಡು ದಾಸಿಯನ್ನು ಕಳುಹಿಸಿ ತರಿಸಿದಳು.
Kannada Bible (KNCL) BSI 2016
ಅಷ್ಟರಲ್ಲಿ ಫರೋಹನ ಪುತ್ರಿ ಸ್ನಾನಕ್ಕಾಗಿ ಆ ನದಿಯ ಬಳಿಗೆ ಇಳಿದು ಬಂದಳು. ಆಕೆಯ ಗೆಳತಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಜಂಬುಹುಲ್ಲಿನ ನಡುವೆ ಪೆಟ್ಟಿಗೆಯೊಂದನ್ನು ಕಂಡಳು. ದಾಸಿಯೊಬ್ಬಳನ್ನು ಕಳಿಸಿ ಅದನ್ನು ತರಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಫರೋಹನ ಮಗಳು ನೈಲ್ ನದಿಯಲ್ಲಿ ಸ್ನಾನ ಮಾಡುವದಕ್ಕೆ ಬಂದಳು. ಆಕೆಯ ದಾಸಿಯರು ನದಿಯ ಅಂಚಿನಲ್ಲಿ ತಿರುಗಾಡುತ್ತಿದ್ದರು. ಫರೋಹನ ಮಗಳು ಜಂಬು ಹುಲ್ಲಿನಲ್ಲಿದ್ದ ಪೆಟ್ಟಿಗೆಯನ್ನು ನೋಡಿ ತನ್ನ ದಾಸಿಯನ್ನು ಕಳುಹಿಸಿ, ಅದನ್ನು ತರಿಸಿದಳು.