Exodus 2:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನ ಮಗಳು ಬುಟ್ಟಿಯನ್ನು ತೆಗೆದು ನೋಡಿದಾಗ ಅಳುತ್ತಿದ್ದ ಗಂಡುಮಗುವನ್ನು ಕಂಡಳು. ಆಕೆಗೆ ಅದರ ಮೇಲೆ ಮರುಕವಾಯಿತು. ಆಕೆ, “ಇದು ಇಬ್ರಿಯರ ಮಗು” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೆಟ್ಟಿಗೆಯನ್ನು ತೆರೆದು ನೋಡುವಾಗ, ಆಹಾ! ಅಳುವ ಕೂಸು. ಆಕೆಗೆ ಅದರ ಮೇಲೆ ಕನಿಕರಹುಟ್ಟಿ, “ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿರಬಹುದು” ಎಂದುಕೊಂಡಳು.
Kannada BSI Bible 2016
ಆ ಪೆಟ್ಟಿಗೆಯನ್ನು ತೆರೆದು ಕೂಸನ್ನು ನೋಡಿದಳು; ಇಗೋ, ಕೂಸು ಅಳುತ್ತಿತ್ತು. ಆಗ ಆಕೆಯು ಅದರ ಮೇಲೆ ಅಂತಃಕರುಣೆಪಟ್ಟು--ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿದೆ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ತೆರೆದು ನೋಡುವಾಗ ಆಹಾ, ಅಳುವ ಕೂಸು. ಆಕೆ ಅದರ ಮೇಲೆ ಕನಿಕರಪಟ್ಟು - ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿರಬಹುದೆಂದು ಹೇಳಿದಳು.
Kannada Bible (KNCL) BSI 2016
ಪೆಟ್ಟಿಗೆಯನ್ನು ತೆರೆದು ನೋಡುವಾಗ ಏನಾಶ್ಚರ್ಯ! ಅದರಲ್ಲಿ ಅಳುವ ಕೂಸು! ಆಕೆಗೆ ಅದರ ಮೇಲೆ ಕನಿಕರ ಹುಟ್ಟಿತು. “ಇದು ಹಿಬ್ರಿಯರ ಮಕ್ಕಳಲ್ಲಿ ಒಂದಾಗಿರಬೇಕು,” ಎಂದುಕೊಂಡಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಪೆಟ್ಟಿಗೆಯನ್ನು ತೆರೆದಾಗ, ಕೂಸನ್ನು ನೋಡಿದಳು. ಕೂಸು ಅಳುತ್ತಿತ್ತು. ಆಕೆಗೆ ಅದರ ಮೇಲೆ ಕನಿಕರ ಹುಟ್ಟಿತು. ಅವಳು, “ಇದು ಹಿಬ್ರಿಯರ ಮಕ್ಕಳಲ್ಲಿ ಒಂದಾಗಿರಬೇಕು,” ಎಂದು ಹೇಳಿದಳು.