Exodus 2:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಗುವಿನ ಅಕ್ಕ ಆಕೆಯ ಬಳಿಗೆ ಬಂದು, “ಮಗುವಿಗೆ ಹಾಲು ಕುಡಿಸಲು ಒಬ್ಬ ಇಬ್ರಿಯ ಸ್ತ್ರೀಯನ್ನು ಕರೆದುಕೊಂಡು ಬರಲೇ?” ಎಂದು ಕೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗಲೇ ಮಗುವಿನ ಅಕ್ಕ ಬಂದು, “ಫರೋಹನ ಮಗಳಿಗೆ ನಿನಗೋಸ್ಕರ ಈ ಕೂಸನ್ನು ಮೊಲೆಕೊಟ್ಟು ಸಾಕುವುದಕ್ಕೆ ಇಬ್ರಿಯ ಸ್ತ್ರೀಯರಲ್ಲಿ ಒಬ್ಬ ದಾದಿಯನ್ನು ನಾನು ಕರೆದುಕೊಂಡು ಬರಬಹುದೋ?” ಎಂದು ಕೇಳಿದಳು.
Kannada BSI Bible 2016
ಆಗ ಅದರ ಅಕ್ಕ ಫರೋಹನ ಮಗಳಿಗೆ--ನಾನು ಹೋಗಿ ಈ ಕೂಸಿಗೆ ಮೊಲೆ ಕೊಡುವ ಹಾಗೆ ಇಬ್ರಿಯ ಸ್ತ್ರೀಯರಿಂದ ಒಬ್ಬ ದಾದಿ ಯನ್ನು ನಿನಗೋಸ್ಕರ ಕರಕೊಂಡು ಬರಲೋ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗಲೇ ಅದರ ಅಕ್ಕ ಬಂದು ಫರೋಹನ ಕುಮಾರ್ತೆಗೆ - ನಿನಗೋಸ್ಕರ ಈ ಕೂಸನ್ನು ಮೊಲೆಕೊಟ್ಟು ಸಾಕುವದಕ್ಕೆ ಇಬ್ರಿಯ ಸ್ತ್ರೀಯರಲ್ಲಿ ಒಬ್ಬ ದಾದಿಯನ್ನು ನಾನು ಕರೆದುಕೊಂಡು ಬರಲೋ ಎಂದು ಕೇಳಲು
Kannada Bible (KNCL) BSI 2016
ಆ ಮಗುವಿನ ಅಕ್ಕ ಬಂದು, “ನಿಮ್ಮ ಪರವಾಗಿ ಈ ಕೂಸನ್ನು ಮೊಲೆಕೊಟ್ಟು ಸಾಕಲು ಹಿಬ್ರಿಯ ಮಹಿಳೆಯರಲ್ಲಿ ಒಬ್ಬ ದಾದಿಯನ್ನು ನಾನು ಕರೆದುಕೊಂಡು ಬರಬಹುದೇ?” ಎಂದು ಫರೋಹನ ಪುತ್ರಿಯನ್ನು ವಿಚಾರಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮಗುವಿನ ಅಕ್ಕ ಫರೋಹನ ಮಗಳಿಗೆ, “ನಾನು ಹೋಗಿ ಈ ಕೂಸಿಗೆ ಹಾಲು ಕೊಟ್ಟು ಸಾಕುವುದಕ್ಕೆ ಹಿಬ್ರಿಯ ಸ್ತ್ರೀಯರಿಂದ ಒಬ್ಬ ದಾದಿಯನ್ನು ನಿನಗೋಸ್ಕರ ಕರೆದುಕೊಂಡು ಬರಲೋ?” ಎಂದಳು.