Exodus 2:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅರಸನ ಮಗಳು, “ಹೋಗಿ, ಕರೆದುಕೊಂಡು ಬಾ” ಅಂದಳು. ಆದ್ದರಿಂದ ಆ ಹುಡುಗಿ ಹೋಗಿ ಮಗುವಿನ ಸ್ವಂತ ತಾಯಿಯನ್ನು ಕರೆದುಕೊಂಡು ಬಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರೋಹನ ಮಗಳು ಆಕೆಗೆ, “ಹೋಗು ಕರೆದುಕೊಂಡು ಬಾ” ಎಂದಳು. ಆ ಹುಡುಗಿ ಹೋಗಿ ಕೂಸಿನ ತಾಯಿಯನ್ನೇ ಕರೆದುತಂದಳು.
Kannada BSI Bible 2016
ಫರೋಹನ ಮಗಳು ಅವಳಿಗೆ-ಹೋಗು ಅಂದಳು. ಆಗ ಆ ಹುಡುಗಿಯು ಹೋಗಿ ಕೂಸಿನ ತಾಯಿಯನ್ನು ಕರೆದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫರೋಹನ ಕುಮಾರ್ತೆ- ಹಾಗೇ ಮಾಡು ಅಂದಳು. ಆ ಹುಡುಗಿ ಹೋಗಿ ಕೂಸಿನ ತಾಯಿಯನ್ನೇ ಕರತಂದಳು.
Kannada Bible (KNCL) BSI 2016
“ಹೌದು, ಹಾಗೆಯೆ ಮಾಡು,” ಎಂದಳು ಫರೋಹನ ಪುತ್ರಿ. ಆ ಹುಡುಗಿ ಹೋಗಿ ಕೂಸಿನ ತಾಯಿಯನ್ನೇ ಕರೆದು ತಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರೋಹನ ಮಗಳು ಆಕೆಗೆ, “ಹೌದು, ಹೋಗು,” ಎಂದಳು. ಆಗ ಆ ಹುಡುಗಿಯು ಹೋಗಿ ಕೂಸಿನ ತಾಯಿಯನ್ನೇ ಕರೆದುಕೊಂಡು ಬಂದಳು.