Exodus 2:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನ ಮಗಳು ತಾಯಿಗೆ, “ಈ ಮಗುವಿಗೆ ಹಾಲು ಕುಡಿಸಿ ನೋಡಿಕೊ, ನಾನು ನಿನಗೆ ಸಂಬಳ ಕೊಡುವೆನು” ಎಂದು ಹೇಳಿದಳು. ಆದ್ದರಿಂದ ಆ ಸ್ತ್ರೀ ತನ್ನ ಮಗುವನ್ನು ತೆಗೆದುಕೊಂಡು ಸಾಕಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರೋಹನ ಮಗಳು ಮಗುವಿನ ತಾಯಿಗೆ, “ನೀನು ಈ ಮಗುವನ್ನು ತೆಗೆದುಕೊಂಡು ಹೋಗಿ ನನಗೋಸ್ಕರ ಹಾಲುಕೊಟ್ಟು ಸಾಕಬೇಕು. ನಾನು ನಿನಗೆ ಸಂಬಳವನ್ನು ಕೊಡುವೆನು” ಎಂದು ಹೇಳಿದಳು. ಆ ಸ್ತ್ರೀಯು ಕೂಸನ್ನು ತೆಗೆದುಕೊಂಡು ಹೋಗಿ ಸಾಕಿದಳು.
Kannada BSI Bible 2016
ಫರೋಹನ ಮಗಳು ಆಕೆಗೆ--ಈ ಮಗು ವನ್ನು ತೆಗೆದುಕೊಂಡುಹೋಗಿ ನನಗೋಸ್ಕರ ಸಾಕು. ನಾನು ನಿನಗೆ ಸಂಬಳವನ್ನು ಕೊಡುವೆನು ಅಂದಳು. ಆಗ ಆ ಸ್ತ್ರೀಯು ಕೂಸನ್ನು ತಕ್ಕೊಂಡು ಹೋಗಿ ಸಾಕಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫರೋಹನ ಕುಮಾರ್ತೆ ಅವಳಿಗೆ - ನೀನು ಈ ಮಗುವನ್ನು ತೆಗೆದುಕೊಂಡು ಹೋಗಿ ನನಗೋಸ್ಕರ ಸಾಕಮ್ಮಾ; ನಾನೇ ನಿನಗೆ ಸಂಬಳವನ್ನು ಕೊಡುವೆನು ಎಂದು ಹೇಳಲಾಗಿ ಆ ಸ್ತ್ರೀಯು ಕೂಸನ್ನು ತೆಗೆದುಕೊಂಡು ಸಾಕಿದಳು.
Kannada Bible (KNCL) BSI 2016
ಅವಳಿಗೆ ಆ ರಾಜಪುತ್ರಿ, “ನೀನು ಈ ಮಗುವನ್ನು ತೆಗೆದುಕೊಂಡು ಹೋಗಿ ನನ್ನ ಪರವಾಗಿ ಸಾಕು. ನಾನೇ ನಿನಗೆ ಸಂಬಳವನ್ನು ಕೊಡುತ್ತೇನೆ,” ಎಂದಳು. ಅಂತೆಯೇ ಆ ಮಹಿಳೆ ಕೂಸನ್ನು ತೆಗೆದುಕೊಂಡು ಹೋಗಿ ಸಾಕಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರೋಹನ ಮಗಳು ಆಕೆಗೆ, “ಈ ಮಗುವನ್ನು ತೆಗೆದುಕೊಂಡುಹೋಗಿ, ನನಗೋಸ್ಕರ ಸಾಕು. ನಾನು ನಿನಗೆ ಸಂಬಳವನ್ನು ಕೊಡುವೆನು,” ಎಂದಳು. ಆಗ ಆ ಸ್ತ್ರೀಯು ಕೂಸನ್ನು ತೆಗೆದುಕೊಂಡುಹೋಗಿ ಸಾಕಿದಳು.