Exodus 20:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಏಳನೆ ದಿನವು ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಮೀಸಲಾಗಿರುವ ವಿಶ್ರಾಂತಿ ದಿನವಾಗಿದೆ. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು. ನೀವಾಗಲಿ ನಿಮ್ಮ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಸೇವಕರಾಗಲಿ ಸೇವಕಿಯರಾಗಲಿ ನಿಮ್ಮ ಪಶುಗಳಾಗಲಿ ನಿಮ್ಮಲ್ಲಿರುವ ವಿದೇಶಿಯರಾಗಲಿ ಕೆಲಸ ಮಾಡಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ಆ ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅನ್ಯದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು.
Kannada BSI Bible 2016
ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್‌ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ; ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡು ಮಕ್ಕಳು ಹೆಣ್ಣು ಮಕ್ಕಳು ಗಂಡಾಳು ಹೆಣ್ಣಾಳು ಪಶುಗಳು ನಿನ್ನ ಊರಲ್ಲಿ ಇರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು.
Kannada Bible (KNCL) BSI 2016
ಏಳನೆಯ ದಿನ ನಿನ್ನ ದೇವರಾದ ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನ. ಅಂದು ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡು ಹೆಣ್ಣು ಮಕ್ಕಳು, ನಿನ್ನ ಗಂಡು ಹೆಣ್ಣು ಆಳುಗಳು, ಪಶುಪ್ರಾಣಿಗಳು ಹಾಗು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಏಳನೆಯ ದಿನ ನಿನ್ನ ದೇವರಾದ ಯೆಹೋವ ದೇವರ ಸಬ್ಬತ್ ದಿನವಾಗಿದೆ. ಅದರಲ್ಲಿ ನೀನಾಗಲೀ, ನಿನ್ನ ಮಗನಾಗಲೀ, ನಿನ್ನ ಮಗಳಾಗಲೀ, ನಿನ್ನ ದಾಸನಾಗಲೀ, ನಿನ್ನ ದಾಸಿಯಾಗಲೀ, ನಿನ್ನ ಪಶುಗಳಾಗಲೀ ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಸಹ ಯಾವ ಕೆಲಸವನ್ನೂ ಮಾಡಬಾರದು.