Exodus 20:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೆಂದರೆ ಯೆಹೋವನು ಆರು ದಿನಗಳಲ್ಲಿ ಕೆಲಸ ಮಾಡಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿದನು. ಆದ್ದರಿಂದ ಯೆಹೋವನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ತನ್ನ ದಿನವನ್ನಾಗಿ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.
Kannada BSI Bible 2016
ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್‌ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿ ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡನು. ಆದದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ದಿನವಾಗಿರಲಿ ಎಂದು ಆಶೀರ್ವದಿಸಿದನು.
Kannada Bible (KNCL) BSI 2016
ಸರ್ವೇಶ್ವರನಾದ ನಾನು ಆರು ದಿನಗಳಲ್ಲಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡೆನು. ಆದುದರಿಂದ ಅದನ್ನು ಸರ್ವೇಶ್ವರನ ವಿಶ್ರಾಂತಿ ದಿನವನ್ನಾಗಿ ಆಶೀರ್ವದಿಸಿ ಪವಿತ್ರಗೊಳಿಸಿದೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಆರು ದಿನಗಳಲ್ಲಿ ಯೆಹೋವ ದೇವರು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದ್ದರಿಂದ ಯೆಹೋವ ದೇವರು ಸಬ್ಬತ್ ದಿನವನ್ನು ಆಶೀರ್ವದಿಸಿ, ಅದನ್ನು ಪರಿಶುದ್ಧ ಮಾಡಿದರು.