Exodus 20:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು; ನೀವು ಸನ್ಮಾನಿಸಿದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.
Kannada BSI Bible 2016
ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ.
Kannada Bible (KNCL) BSI 2016
ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.