Exodus 20:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ನೆರೆಯವನ ಮನೆಯನ್ನು ಆಶಿಸಬಾರದು. ನೀವು ಮತ್ತೊಬ್ಬನ ಹೆಂಡತಿಯನ್ನಾಗಲಿ ಸೇವಕರನ್ನಾಗಲಿ ದಾಸಿಯರನ್ನಾಗಲಿ ಪಶುಗಳನ್ನಾಗಲಿ ಆಶಿಸಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.”
Kannada BSI Bible 2016
ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೊಬ್ಬನ ಮನೆಯನ್ನು ಆಶಿಸಬಾರದು; ಮತ್ತೊಬ್ಬನ ಹೆಂಡತಿ ಗಂಡಾಳು ಹೆಣ್ಣಾಳು ಎತ್ತು ಕತ್ತೆ ಮುಂತಾದ ಯಾವದನ್ನೂ ಆಶಿಸಬಾರದು.
Kannada Bible (KNCL) BSI 2016
ನೆರೆಯವನ ಮನೆಯನ್ನು ಬಯಸಬೇಡ; ಅವನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬೇಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ನೆರೆಯವನ ಮನೆಯನ್ನು ಆಶಿಸಬೇಡ. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ.”