Exodus 20:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅಲ್ಲಿದ್ದ ಜನರು ಗುಡುಗಿನ ಧ್ವನಿಯನ್ನು ಕೇಳಿದರು; ಬೆಟ್ಟದ ಮೇಲೆ ಮಿಂಚುಗಳನ್ನು ನೋಡಿದರು; ಹೊಗೆಯು ಬೆಟ್ಟದಿಂದ ಏರುವುದನ್ನು ಕಂಡರು. ಅವರೆಲ್ಲರೂ ಭಯದಿಂದ ನಡುಗಿದರು; ಬೆಟ್ಟದಿಂದ ದೂರದಲ್ಲಿದ್ದುಕೊಂಡು ಅವುಗಳನ್ನೆಲ್ಲಾ ಗಮನಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು.
Kannada BSI Bible 2016
ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಗುಡುಗುವಿುಂಚುಗಳನ್ನೂ ತುತೂರಿ ಧ್ವನಿಯಾಗುತ್ತಿರುವದನ್ನೂ ಬೆಟ್ಟದಿಂದ ಹೊಗೆ ಹೊರಡುವದನ್ನೂ ಜನರೆಲ್ಲರು ನೋಡಿ ನಡುಗುತ್ತಾ ದೂರದಲ್ಲಿ ನಿಂತುಕೊಂಡರು.
Kannada Bible (KNCL) BSI 2016
ಆ ಗುಡುಗು ಮಿಂಚನ್ನು, ತುತೂರಿ ಧ್ವನಿಯನ್ನು ಹಾಗು ಬೆಟ್ಟದಿಂದ ಹೊರಡುತ್ತಿದ್ದ ಹೊಗೆಯನ್ನು ಜನರೆಲ್ಲರು ನೋಡಿದರು. ನೋಡಿ ನಡುಗುತ್ತಾ ದೂರದಲ್ಲೇ ನಿಂತುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟದಲ್ಲಿ ಹೊಗೆ ಹಾಯುವುದನ್ನೂ ನೋಡಿದರು. ಜನರು ಅದನ್ನು ನೋಡಿ ನಡುಗುತ್ತಾ ದೂರಹೋಗಿ ನಿಂತುಕೊಂಡರು.