Exodus 20:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಒಂದು ವಿಶೇಷ ಯಜ್ಞವೇದಿಕೆಯನ್ನು ನನಗೋಸ್ಕರ ಮಣ್ಣಿನಿಂದ ಕಟ್ಟಿರಿ. ಈ ಯಜ್ಞವೇದಿಕೆಯ ಮೇಲೆ ಕುರಿದನಗಳನ್ನು ನನಗೆ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಸಮರ್ಪಿಸಿರಿ. ನಾನು ನಿಮಗೆ ಹೇಳುವ ಪ್ರತಿಯೊಂದು ಸ್ಥಳದಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಳ್ಳಲು ಹೀಗೆಯೇ ಮಾಡಿರಿ. ಆಗ ನಾನು ಬಂದು ನಿಮ್ಮನ್ನು ಆಶೀರ್ವದಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
Kannada BSI Bible 2016
ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಸರ್ವಾಂಗ ಹೋಮಮಾಡುವಾಗಲೂ ಸಮಾಧಾನ ಯಜ್ಞಮಾಡುವಾಗಲೂ ನಿಮ್ಮ ಕುರಿದನಗಳನ್ನು ಅಂಥ ವೇದಿಯಲ್ಲಿಯೇ ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ನಿಮ್ಮ ನೆನಪಿಗೆ ಬರಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
Kannada Bible (KNCL) BSI 2016
ನನಗಾಗಿ ನೀವು ಮಣ್ಣಿನಿಂದ ಒಂದು ಬಲಿಪೀಠವನ್ನು ಮಾಡಬೇಕು. ಅದರ ಮೇಲೆ ನಿಮ್ಮ ದನಕುರಿಗಳನ್ನು ದಹನ ಬಲಿಯನ್ನಾಗಿಯೂ ಸಮಾಧಾನ ಬಲಿಯನ್ನಾಗಿಯೂ ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಬಲಿಪೀಠವನ್ನು ಮಣ್ಣಿನಿಂದ ಮಾಡಬೇಕು. ಅದರ ಮೇಲೆ ನಿಮ್ಮ ಸಮರ್ಪಣೆಗಳಾದ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಮೇಕೆಗಳನ್ನೂ ದನಗಳನ್ನೂ ಅರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.