Exodus 20:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಯಜ್ಞವೇದಿಕೆಯನ್ನು ಕಲ್ಲುಗಳಿಂದ ಕಟ್ಟಬೇಕೆಂದಿದ್ದರೆ, ಉಳಿಯಿಂದ ಕೆತ್ತಿದ ಕಲ್ಲುಗಳನ್ನು ಉಪಯೋಗಿಸಬೇಡಿರಿ. ಅಂಥ ಕಲ್ಲುಗಳನ್ನು ಉಪಯೋಗಿಸಿದರೆ, ಯಜ್ಞವೇದಿಕೆಯು ಅಪವಿತ್ರವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನನಗಾಗಿ ಕಲ್ಲಿನಿಂದ ಯಜ್ಞವೇದಿಯನ್ನು ಕಟ್ಟುವುದಾದರೆ, ಅದನ್ನು ಕೆತ್ತಿರುವ ಕಲ್ಲುಗಳಿಂದ ಕಟ್ಟಬಾರದು. ಏಕೆಂದರೆ ಉಳಿ, ಮುಂತಾದುದನ್ನು ಅದರ ಮೇಲೆ ಉಪಯೋಗಿಸಿದರೆ ಅದು ಅಪವಿತ್ರವಾಗುವುದು.
Kannada BSI Bible 2016
ನೀನು ನನಗೆ ಯಜ್ಞವೇದಿ ಯನ್ನು ಕಲ್ಲಿನಿಂದ ಮಾಡಿದರೆ ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಉಳಿಯನ್ನು ಅದರ ಮೇಲೆ ಎತ್ತಿದರೆ ನೀನು ಅದನ್ನು ಅಪವಿತ್ರ ಮಾಡಿದವನಾಗಿದ್ದೀ.ಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನನಗಾಗಿ ಕಲ್ಲಿನಿಂದ ಯಜ್ಞವೇದಿಯನ್ನು ಕಟ್ಟಬೇಕಾದರೆ ಕೆತ್ತಿರುವ ಕಲ್ಲುಗಳಿಂದ ಕಟ್ಟಕೂಡದು; ಅದಕ್ಕೆ ಉಳಿ ಮುಂತಾದದ್ದನ್ನು ಉಪಯೋಗಿಸಿದರೆ ಅದು ಅಪರಿಶುದ್ಧವಾಗುವದು.
Kannada Bible (KNCL) BSI 2016
ನನ್ನ ಹೆಸರನ್ನು ನಿಮ್ಮ ನೆನಪಿಗೆ ಬರಮಾಡುವ ಎಲ್ಲ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಲಿಪೀಠವನ್ನು ಕಲ್ಲಿನಿಂದ ಮಾಡಿದರೆ, ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಏಕೆಂದರೆ ಉಳಿಯನ್ನು ಅದರ ಮೇಲೆ ಉಪಯೋಗಿಸಿದರೆ, ಅದನ್ನು ಅಪವಿತ್ರಮಾಡಿದ ಹಾಗಾಗುತ್ತದೆ.