Exodus 20:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ಯಾವ ವಿಗ್ರಹಗಳನ್ನೂ ಮಾಡಬಾರದು. ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ನೀರಿನಲ್ಲಾಗಲಿ ಇರುವ ಯಾವುದೇ ವಸ್ತುವಿನ ರೂಪವನ್ನು ನೀವು ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜಿಸಲೂ ಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.
Kannada BSI Bible 2016
ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ ಭೂವಿುಯಲ್ಲಾಗಲಿ ಭೂವಿುಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವದರ ರೂಪವನ್ನೂ ಮಾಡಿಕೊಳ್ಳಬಾರದು.
Kannada Bible (KNCL) BSI 2016
ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ, ಇರುವ ಯಾವುದರ ರೂಪವನ್ನು ಅಥವಾ ವಿಗ್ರಹವನ್ನು ಮಾಡಿಕೊಳ್ಳಬೇಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.