Exodus 21:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯಜಮಾನನು ಇನ್ನೊಬ್ಬ ಸ್ತ್ರೀಯನ್ನು ಮದುವೆಯಾದರೆ, ಅವನು ತನ್ನ ಮೊದಲನೆಯ ಹೆಂಡತಿಗೆ ಅವನು ಕೊಡುವ ಆಹಾರ ಅಥವಾ ಬಟ್ಟೆಬರೆಗಳಲ್ಲಿ ಏನೂ ಕಡಿಮೆ ಮಾಡಬಾರದು; ಮದುವೆಯ ಮೂಲಕ ಆಕೆಯು ಯಾವ್ಯಾವ ವಸ್ತುಗಳನ್ನು ಹೊಂದಲು ಹಕ್ಕು ಪಡೆದಿರುತ್ತಾಳೊ ಅವೆಲ್ಲವನ್ನು ಅವನು ಆಕೆಗೆ ಕೊಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಜಮಾನನು ಇನ್ನೊಬ್ಬಳನ್ನು ಮದುವೆಯಾದರೆ ಮೊದಲನೆಯವಳಿಗೆ ಅನ್ನ, ವಸ್ತ್ರ, ದಾಂಪತ್ಯದ ಹಕ್ಕುಗಳನ್ನು ಕಡಿಮೆಮಾಡಬಾರದು.
Kannada BSI Bible 2016
ಒಂದು ವೇಳೆ ಅವನು ತನಗೆ ಇನ್ನೊಬ್ಬ ಹೆಂಡತಿ ಯನ್ನು ತಕ್ಕೊಂಡರೆ ಅವಳ ಅನ್ನ ವಸ್ತ್ರ ಸಹವಾಸಗಳನ್ನು ಕಡಿಮೆಮಾಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಜಮಾನನು ಇನ್ನೊಬ್ಬಳನ್ನು ಸೇರಿಸಿಕೊಂಡರೂ ಮೊದಲನೆಯವಳಿಗೆ ಅನ್ನವಸ್ತ್ರ ಸಹವಾಸಗಳನ್ನು ಕಡಿಮೆಮಾಡಕೂಡದು.
Kannada Bible (KNCL) BSI 2016
ಯಜಮಾನ ಇನ್ನೊಬ್ಬಳನ್ನು ಸೇರಿಸಿಕೊಂಡರೂ ಮೊದಲನೆಯವಳಿಗೆ ಅನ್ನ, ಬಟ್ಟೆ, ದಾಂಪತ್ಯದ ಹಕ್ಕುಗಳನ್ನು ಕಡಿಮೆ ಮಾಡಕೂಡದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ವೇಳೆ ಅವನು ಇನ್ನೊಬ್ಬಳನ್ನು ಮದುವೆಯಾದರೆ, ಮೊದಲನೆಯವಳಿಗೆ ಅನ್ನ, ವಸ್ತ್ರ, ದಾಂಪತ್ಯದ ಹಕ್ಕನ್ನು ಕಡಿಮೆ ಮಾಡಬಾರದು.