Exodus 21:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಕೊಲ್ಲಬೇಕೆಂಬ ಉದ್ದೇಶವಿಲ್ಲದೆ ಹೊಡೆದಾಗ ಸತ್ತುಹೋದರೆ ಅದು ದೇವರ ಸಂಕಲ್ಪವೆಂದು ಪರಿಗಣಿಸಬೇಕು. ನಾನು ನೇಮಿಸಲಿರುವ ಆಶ್ರಯಸ್ಥಳಗಳಿಗೆ ಹೊಡೆದವನು ಓಡಿಹೋಗಿ ಸುರಕ್ಷಿತವಾಗಿ ಬದುಕಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ದೇವರ ಸಂಕಲ್ಪದಿಂದ ಆ ಕೊಲೆ ನಡೆದಿದೆಯಾದರೆ, ಆ ಕೊಲೆಮಾಡಿದವನು ಓಡಿಹೋಗುವಂತೆ ಅವನಿಗೆ ನಾನು ಒಂದು ಸ್ಥಳವನ್ನು ನೇಮಿಸುವೆನು.
Kannada BSI Bible 2016
ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಕೊಲ್ಲಬೇಕೆಂಬ ಅಭಿಪ್ರಾಯವಿಲ್ಲದೆ ದೇವರ ಸಂಕಲ್ಪದಿಂದ ಹತ್ಯ ನಡೆದರೆ ಆ ಹತ್ಯ ಮಾಡಿದವನು ನಾನು ನೇವಿುಸುವ ಆಶ್ರಯಸ್ಥಳಕ್ಕೆ ಓಡಿಹೋಗಿ ಬದುಕಬಹುದು.
Kannada Bible (KNCL) BSI 2016
ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ಆಕಸ್ಮಿಕವಾಗಿ ಒಬ್ಬನ ಹತ್ಯ ಆಗಿದ್ದರೆ ಆ ಹತ್ಯೆಗೆ ಕಾರಣವಾದವನು ನಾನು ನೇಮಿಸುವ ಆಶ್ರಯ ಸ್ಥಳಕ್ಕೆ ಓಡಿಹೋಗಿ ಬದುಕಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಕೊಲ್ಲಬೇಕೆಂಬ ಯೋಚನೆ ಇಲ್ಲದೆ ದೇವರು ಅನುಮತಿಸಿದ್ದರಿಂದ ಕೊಲೆಯಾದರೆ, ಕೊಂದವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಾನು ನೇಮಿಸುವೆನು.