Exodus 21:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಒಬ್ಬನು ಕೋಪದಿಂದಾಗಲಿ ದ್ವೇಷದಿಂದಾಗಲಿ ಇನ್ನೊಬ್ಬನನ್ನು ಕೊಂದರೆ, ಆ ಕೊಲೆಗಾರನಿಗೆ ದಂಡನೆಯಾಗಬೇಕು. ನನ್ನ ಯಜ್ಞವೇದಿಕೆಯಿಂದ ಅವನನ್ನು ದೂರಕ್ಕೆ ತೆಗೆದುಕೊಂಡು ಹೋಗಿ ಕೊಲ್ಲಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು.
Kannada BSI Bible 2016
ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೊಲ್ಲಬೇಕೆಂಬ ಉದ್ದೇಶದಿಂದಲೇ ಮತ್ತೊಬ್ಬನನ್ನು ಮೋಸದಿಂದ ಕೊಂದವನನ್ನು ನನ್ನ ಯಜ್ಞವೇದಿಯ ಬಳಿಯಿಂದಲೂ ಎಳೆದು ಅವನಿಗೆ ಮರಣಶಿಕ್ಷೆಯನ್ನು ಕೊಡಬೇಕು.
Kannada Bible (KNCL) BSI 2016
ಕೊಲ್ಲಬೇಕೆಂಬ ಉದ್ದೇಶದಿಂದಲೆ ಮತ್ತೊಬ್ಬನನ್ನು ಮೋಸದಿಂದ ಕೊಂದವನನ್ನು ನನ್ನ ಬಲಿಪೀಠದ ಬಳಿಯಿದ್ದರೂ ಎಳೆದು ಅವನಿಗೆ ಮರಣ ದಂಡನೆ ಕೊಡಬೇಕು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಒಬ್ಬನು ಮತ್ತೊಬ್ಬನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಬಲಿಪೀಠದಿಂದ ದೂರ ತೆಗೆದುಕೊಂಡುಹೋಗಿ ಕೊಂದುಹಾಕಬೇಕು.