Exodus 21:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಾಯಗೊಂಡವನು ಕೆಲವು ಕಾಲದವರೆಗೆ ಹಾಸಿಗೆಯಲ್ಲಿರಬೇಕಾದರೆ, ಬಳಿಕ ಅವನು ಎದ್ದು ಊರುಗೋಲಿನ ಸಹಾಯದಿಂದ ನಡೆಯಬಲ್ಲವನಾದರೆ, ಹೊಡೆದವನು ಅವನನ್ನು ಆರೈಕೆ ಮಾಡಬೇಕು. ಗಾಯಗೊಂಡವನು ಕೆಲಸಮಾಡಲಾರದೆ ಹೋದ ಸಮಯಕ್ಕೆ ಹೊಡೆದವನು ಹಣ ಕೊಡಬೇಕು; ಅವನು ಸಂಪೂರ್ಣ ವಾಸಿಯಾಗುವವರೆಗೆ ಆರೈಕೆ ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ ಅವನನ್ನು ಹೊಡೆದವನಿಗೆ ಶಿಕ್ಷೆಯನ್ನು ವಿಧಿಸಬಾರದು. ಆದರೆ ಪೆಟ್ಟುತಿಂದ ಮನುಷ್ಯನು ಗುಣಹೊಂದುವವರೆಗೂ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು.
Kannada BSI Bible 2016
ಅವನು ಎದ್ದು ಕೋಲೂರಿಕೊಂಡು ತಿರುಗಾಡು ವಾಗ ಅವನಿಗೆ ಹೊಡೆದವನು ಅಪರಾಧವಿಲ್ಲದೆ ಹೋಗಬೇಕು. ಅವನ ನಷ್ಟವಾದ ಸಮಯಕ್ಕಾಗಿ ಮಾತ್ರ ಅವನಿಗೆ ಹಣ ಕೊಡಬೇಕು. ಅವನನ್ನು ಪೂರ್ಣ ಸ್ವಸ್ಥಮಾಡಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಆ ಮನುಷ್ಯನು ಕೆಲಸಮಾಡಲಾರದೆಹೋದ ಕಾಲಕ್ಕೆ ಅವನು ತಕ್ಕಷ್ಟು ಹಣಕೊಟ್ಟು ಅವನನ್ನು ಪೂರ್ಣವಾಗಿ ಸ್ವಸ್ಥಪಡಿಸಬೇಕು.
Kannada Bible (KNCL) BSI 2016
ಇಂಥ ಸಂದರ್ಭಗಳಲ್ಲಿ ಹೊಡೆದವನಿಗೆ ಶಿಕ್ಷೆಯಾಗಬಾರದು. ಆದರೆ ಗಾಯಗೊಂಡವನು ಕೆಲಸ ಮಾಡಲಾರದೆ ಹೋದ ಕಾಲಕ್ಕೆ ತಕ್ಕಷ್ಟು ಹಣ ಕೊಡಬೇಕು. ಹಾಗು ಅವನು ಪೂರ್ಣ ಸ್ವಸ್ಥನಾಗುವ ವರೆಗೂ ನೋಡಿಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ, ಅವನನ್ನು ಹೊಡೆದವನು ಅಪರಾಧವಿಲ್ಲದೆ ಹೋಗಬೇಕು. ಪೆಟ್ಟು ತಿಂದವನು ಗುಣಹೊಂದುವವರೆಗೆ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನನ್ನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು.