Exodus 21:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಇಬ್ರಿಯ ಗುಲಾಮನನ್ನು ಕೊಂಡುಕೊಂಡರೆ, ಆ ಗುಲಾಮನು ಆರು ವರ್ಷಗಳವರೆಗೆ ಮಾತ್ರ ನಿಮ್ಮ ಸೇವೆಮಾಡುವನು. ಆರು ವರ್ಷಗಳ ನಂತರ, ಅವನು ಬಿಡುಗಡೆಯಾಗುವನು, ಅವನು ಏನೂ ಕೊಡಬೇಕಾಗಿರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನಿಮ್ಮಲ್ಲಿ ಯಾರಾದರೂ ಇಬ್ರಿಯನೊಬ್ಬನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ, ಆ ಇಬ್ರಿಯನು ಆರು ವರ್ಷ ದಾಸನಾಗಿದ್ದು ಏಳನೆಯ ವರ್ಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.
Kannada BSI Bible 2016
ನೀನು ಇಬ್ರಿಯ ದಾಸನನ್ನು ಕೊಂಡುಕೊಂಡರೆ ಅವನು ಆರು ವರುಷ ನಿನಗೆ ಸೇವೆಮಾಡಬೇಕು; ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಅವನು ಹೋಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ಯಾವನಾದರೂ ಇಬ್ರಿಯನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ ಆ ಇಬ್ರಿಯನು ಆರು ವರುಷ ದಾಸನಾಗಿದ್ದು ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.
Kannada Bible (KNCL) BSI 2016
ನಿಮ್ಮಲ್ಲಿ ಯಾವನಾದರು ಒಬ್ಬ ಇಬ್ರಿಯನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ ಆ ಇಬ್ರಿಯನು ಆರು ವರ್ಷ ಗುಲಾಮನಾಗಿ ದುಡಿದು ಏಳನೆಯ ವರ್ಷ ‘ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಹಿಬ್ರಿಯ ದಾಸನನ್ನು ಕೊಂಡುಕೊಂಡರೆ, ಅವನು ಆರು ವರ್ಷ ನಿನಗೆ ಸೇವೆಮಾಡಬೇಕು. ಏಳನೆಯ ವರ್ಷದಲ್ಲಿ ಅವನು ಏನೂ ಕೊಡದೆ ಬಿಡುಗಡೆಯಾಗಿ ಹೋಗಲಿ.