Exodus 21:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಬ್ಬರು ಜಗಳವಾಡುವಾಗ ಗರ್ಭಿಣೆ ಸ್ತ್ರೀಗೆ ಪೆಟ್ಟಾಗಿ ಗರ್ಭಸ್ರಾವವಾದರೆ ಅದಕ್ಕೆ ಕಾರಣನಾದ ವ್ಯಕ್ತಿಯು ಅವಳಿಗೆ ದಂಡ ಕೊಡಬೇಕು. ಅವನು ಎಷ್ಟು ದಂಡ ಕೊಡಬೇಕೆಂಬುದನ್ನು ಅವಳ ಗಂಡನು ನ್ಯಾಯಾಧಿಪತಿಗಳ ಸಹಾಯದಿಂದ ತೀರ್ಮಾನಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಂಡಸರು ಜಗಳವಾಡುವಾಗ ಗರ್ಭಿಣಿಯಾದ ಹೆಂಗಸಿಗೆ ಏಟು ತಗಲಿದ್ದರಿಂದ ಅವಳಿಗೆ ಗರ್ಭಸ್ರಾವವಾದರೆ, ಆ ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು.
Kannada BSI Bible 2016
ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿ ಯಾದ ಸ್ತ್ರೀಗೆ ಏಟು ತಗಲಿದದರಿಂದ ಅವಳಿಗೆ ಗರ್ಭ ಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಸ್ತ್ರೀಯ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡು ತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿಯಾದ ಹೆಂಗಸಿಗೆ ಏಟು ತಗಲಿದದರಿಂದ ಅವಳಿಗೆ ಗರ್ಭಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಹೆಂಗಸಿನ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡುತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು.
Kannada Bible (KNCL) BSI 2016
“ಜನರು ಜಗಳವಾಡುವಾಗ ಗರ್ಭಿಣಿಯಾದ ಒಬ್ಬ ಹೆಂಗಸಿಗೆ ಏಟು ತಗಲಿ ಅವಳಿಗೆ ಗರ್ಭಸ್ರಾವ ಆಗಿ, ಬೇರೆ ಯಾವ ಹಾನಿಯೂ ಆಕೆಗೆ ಆಗದೆ ಇದ್ದಲ್ಲಿ, ಆ ಹೆಂಗಸಿನ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತುಮಾಡುತ್ತಾನೋ ಅಷ್ಟನ್ನು ಹೊಡೆದವನು ಕೊಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಜನರು ಜಗಳವಾಡುವಾಗ ಗರ್ಭಿಣಿಯಾದ ಸ್ತ್ರೀಗೆ ಏಟು ತಗಲಿ ಗರ್ಭಸ್ರಾವವಾದರೆ, ಆ ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು.