Exodus 21:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಒಬ್ಬನ ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದರೆ, ಆಗ ನೀವು ಕಲ್ಲುಗಳಿಂದ ಆ ಎತ್ತನ್ನು ಕೊಲ್ಲಬೇಕು. ನೀವು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಮಾಲಿಕನು ತಪ್ಪಿಸಸ್ಥನಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವುದಾದರೂ ಒಂದು ಎತ್ತು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ, ತಿವಿದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಬಾರದು. ಆದರೆ ಆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.
Kannada BSI Bible 2016
ಇದಲ್ಲದೆ ಯಾವದಾದರೂ ಒಂದು ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದುಕೊಂದರೆ ಆ ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು; ಅದರ ಮಾಂಸವನ್ನು ತಿನ್ನಕೂಡದು; ಆ ಎತ್ತಿನ ಒಡೆಯನೋ ನಿರ್ದೋಷಿ.
Kannada Bible (KNCL) BSI 2016
“ಎತ್ತೊಂದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ತಿವಿದು ಕೊಂದರೆ ಆ ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಕೂಡದು. ಆ ಎತ್ತಿನ ಒಡೆಯನಾದರೋ ದೋಷಿಯಾಗಲಾರನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಾವುದಾದರೂ ಒಂದು ಎತ್ತು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಹಾಯ್ದು ಕೊಂದರೆ, ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಬಾರದು. ಆ ಎತ್ತಿನ ಯಜಮಾನನು ನಿರಪರಾಧಿ.