Exodus 21:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಹಿಂದೊಮ್ಮೆ ಆ ಎತ್ತು ಜನರಿಗೆ ತಿವಿದಿದ್ದು, ಅದರ ಮಾಲಿಕನಿಗೆ ಇದರ ವಿಷಯದಲ್ಲಿ ಎಚ್ಚರಿಕೆ ನೀಡಿದ್ದರೆ ಆಗ ಆ ಮಾಲಿಕನು ತಪ್ಪಿತಸ್ಥನಾಗಿದ್ದಾನೆ. ಯಾಕೆಂದರೆ ಅವನು ಆ ಎತ್ತನ್ನು ಕಟ್ಟಿಹಾಕಲಿಲ್ಲ ಅಥವಾ ಅದರ ಸ್ಥಳದಲ್ಲಿ ಬಂಧಿಸಿರಲಿಲ್ಲ. ಆದ್ದರಿಂದ ಎತ್ತನ್ನು ಕಟ್ಟಿಹಾಕದೆ ಇದ್ದುದರಿಂದ, ಅದು ಯಾರನ್ನಾದರೂ ಕೊಂದರೆ, ಆಗ ಆ ಮಾಲಿಕನು ತಪ್ಪಿತಸ್ಥನಾಗಿದ್ದಾನೆ. ನೀವು ಎತ್ತನ್ನು ಕಲ್ಲೆಸೆದು ಕೊಲ್ಲಬೇಕಲ್ಲದೆ ಅದರ ಮಾಲಿಕನನ್ನೂ ಕೊಲ್ಲಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅದು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಕೊಂದು ಹಾಕಿದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಅಲ್ಲದೆ ಅದರ ಯಜಮಾನನೂ ಮರಣದಂಡನೆಗೆ ಗುರಿಯಾಗುವನು.
Kannada BSI Bible 2016
ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆ ಎತ್ತು ತತ್ಪೂರ್ವದಲ್ಲಿ ಹಾಯುವ ಸ್ವಭಾವದ್ದೆಂದು ಒಡೆಯನು ಎಚ್ಚರಿಕೆಯನ್ನು ಹೊಂದಿದಾಗ್ಯೂ ಅದನ್ನು ಕಟ್ಟಿಹಾಕದೆ ಹೋದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಸಾಯಿಸಿದ್ದಾದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕಲ್ಲದೆ ಒಡೆಯನೂ ಮರಣಶಿಕ್ಷೆಗೆ ಗುರಿಯಾಗುವನು.
Kannada Bible (KNCL) BSI 2016
ಆದರೆ ಆ ಎತ್ತು ಹಿಂದಿನಿಂದಲೂ ತಿವಿಯುವ ಸ್ವಭಾವದ್ದೆಂದು ಒಡೆಯನಿಗೆ ಎಚ್ಚರಿಕೆ ನೀಡಿದ್ದರೂ ಅವನು ಅದನ್ನು ಕಟ್ಟಿಹಾಕದೆ ಹೋದ ಕಾರಣ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಸಾಯಿಸಿದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು, ಮಾತ್ರವಲ್ಲ ಆ ಒಡೆಯನು ಕೂಡ ಮರಣದಂಡನೆಗೆ ಗುರಿ ಆಗುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಕಟ್ಟಿಹಾಕದೆ ಇದ್ದುದರಿಂದ ಅದು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಕೊಂದುಹಾಕಿದರೆ, ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಆದರೆ ಯಜಮಾನನೂ ಮರಣದಂಡನೆಗೆ ಗುರಿಯಾಗುವನು.