Exodus 21:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ನಿಮ್ಮ ಗುಲಾಮನಾಗುವಾಗ ಮದುವೆಯಾಗಿಲ್ಲದಿದ್ದರೆ, ಅವನು ಬಿಡುಗಡೆ ಹೊಂದುವಾಗಲೂ ಹೆಂಡತಿಯಿಲ್ಲದವನಾಗಿ ಹೋಗುವನು. ಆದರೆ ಅವನು ನಿಮ್ಮ ಗುಲಾಮನಾಗುವಾಗ ಮದುವೆಯಾಗಿದ್ದರೆ ಅವನು ಬಿಡುಗಡೆ ಹೊಂದುವಾಗ ತನ್ನ ಹೆಂಡತಿಯನ್ನು ಕರೆದುಕೊಂಡು ಹೋಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪುರುಷನು ಒಂಟಿಯಾಗಿ ಬಂದಿದ್ದರೆ ಒಂಟಿಯಾಗಿಯೇ ಹೊರಟುಹೋಗಬೇಕು. ಮದುವೆಯಾಗಿ ಬಂದಿದ್ದರೆ ಅವನ ಹೆಂಡತಿಯೂ ಅವನ ಜೊತೆ ಹೋಗಬೇಕು.
Kannada BSI Bible 2016
ಅವನು ಒಬ್ಬನಾಗಿ ಬಂದಿದ್ದರೆ ಒಬ್ಬನಾಗಿಯೇ ಹೋಗ ಬೇಕು. ಅವನು ಮದುವೆಯಾದವನಾಗಿದ್ದರೆ ಅವನ ಹೆಂಡತಿಯು ಅವನ ಸಂಗಡ ಹೋಗಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಮದುವೆಯಿಲ್ಲದವನಾಗಿ ಬಂದಿದ್ದರೆ ಒಂಟಿಗನಾಗಿಯೇ ಹೊರಟುಹೋಗಬೇಕು. ಹೆಂಡತಿಯುಳ್ಳವನಾಗಿ ಬಂದಿದ್ದರೆ ಹೆಂಡತಿಯೂ ಅವನ ಜೊತೆಯಲ್ಲಿ ಹೋಗಬೇಕು.
Kannada Bible (KNCL) BSI 2016
ಅವನು ಮದುವೆಯಿಲ್ಲದವನಾಗಿ ಬಂದಿದ್ದರೆ ಒಂಟಿಗನಾಗಿಯೇ ಹೋಗಲಿ. ಹೆಂಡತಿಯುಳ್ಳವನಾಗಿ ಬಂದಿದ್ದರೆ ಹೆಂಡತಿಯೂ ಅವನ ಜೊತೆಯಲ್ಲಿ ಹೋಗಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಒಬ್ಬನಾಗಿ ಬಂದಿದ್ದರೆ, ಒಬ್ಬನಾಗಿಯೇ ಹೋಗಬೇಕು. ಅವನು ಮದುವೆಯಾದವನಾಗಿದ್ದರೆ, ಅವನ ಹೆಂಡತಿಯು ಅವನ ಸಂಗಡ ಹೋಗಬೇಕು.