Exodus 21:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಸತ್ತವನ ಕುಟುಂಬದವರು ಅವನಿಂದ ಹಣವನ್ನು ಕೇಳಿದರೆ ಮತ್ತು ಅವನು ಹಣವನ್ನು ಕೊಟ್ಟರೆ, ಅವನು ತನ್ನ ಜೀವವನ್ನು ಬಿಡಿಸಿಕೊಂಡಂತಾಗುವುದು. ಆಗ ಆ ಎತ್ತಿನ ಮಾಲಿಕನನ್ನು ಕೊಲ್ಲಬಾರದು. ಆದರೆ ನ್ಯಾಯಾಧಿಪತಿಗಳು ತೀರ್ಮಾನಿಸುವಷ್ಟು ಹಣವನ್ನು ಅವನು ಕೊಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯಜಮಾನನಿಗೆ ಹಣವನ್ನು ನೇಮಿಸಿದರೆ ಅವನು ತನಗೆ ನೇಮಕವಾದ ಹಣವನ್ನು ಕೊಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಿ.
Kannada BSI Bible 2016
ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿ ಸಿದರೆ ಅವನು ತನಗೆ ನೇಮಿಸಿದ್ದನ್ನು ತನ್ನ ಪ್ರಾಣ ವಿಮೋಚನೆಗಾಗಿ ಕೊಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆ ಒಡೆಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವದಕ್ಕೆ ಹಣವನ್ನು ಈಡಾಗಿ ಕೊಡಬಹುದೆಂದು [ನ್ಯಾಯಾಧಿಪತಿಗಳು] ತೀರ್ಮಾನಿಸಿದರೆ ನೇಮಕವಾದ ಹಣವನ್ನು ಅವನು ಕೊಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳಬಹುದು.
Kannada Bible (KNCL) BSI 2016
ಆದರೆ ಆ ಒಡೆಯ ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕೆ ಹಣವನ್ನು ಈಡಾಗಿ ಕೊಡಬಹುದೆಂದು ತೀರ್ಮಾನವಾದರೆ ನೇಮಕವಾದ ಹಣವನ್ನು ಕೊಟ್ಟು ಅವನು ತನ್ನ ಪ್ರಾಣವನ್ನು ಉಳಿಸಿಕೊಳ್ಳಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿಸಿದರೆ, ಅವನು ತನಗೆ ನೇಮಿಸಿದ್ದನ್ನೆಲ್ಲಾ ತನ್ನ ಪ್ರಾಣವಿಮೋಚನೆಗಾಗಿ ಕೊಡಲಿ.