Exodus 21:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಎತ್ತು ಗುಲಾಮನನ್ನು ಕೊಂದರೆ, ಆಗ ಆ ಪಶುವಿನ ಮಾಲಿಕನು ಗುಲಾಮನ ಯಜಮಾನನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕು ಮತ್ತು ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವನ್ನು ಪಾಲಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾಸನನ್ನಾದರೂ ಅಥವಾ ದಾಸಿಯನ್ನಾದರೂ ಎತ್ತು ತಿವಿದರೆ ದಾಸನ ಅಥವಾ ದಾಸಿಯ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
Kannada BSI Bible 2016
ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಿವಿಸಿಕೊಂಡು ಸತ್ತವನು ದಾಸನು ಅಥವಾ ದಾಸಿಯು ಆಗಿದ್ದ ಪಕ್ಷಕ್ಕೆ ಅವರ ಯಜಮಾನನಿಗೆ ಮೂವತ್ತು ರೂಪಾಯಿ ಈಡುಕೊಡಿಸಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಿಸಬೇಕು.
Kannada Bible (KNCL) BSI 2016
ತಿವಿಸಿಕೊಂಡು ಸತ್ತವರು ದಾಸದಾಸಿಯರಾಗಿದ್ದರೆ ಅವರ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಈಡುಕೊಡಿಸಬೇಕು ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾಸನನ್ನಾದರೂ, ದಾಸಿಯನ್ನಾದರೂ ಎತ್ತು ಹಾಯ್ದರೆ, ದಾಸನ, ದಾಸಿಯ ಯಜಮಾನನಿಗೆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಡಬೇಕು ಮತ್ತು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.