Exodus 21:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕುಣಿಯನ್ನು ತೋಡಿದವನು ಆ ಪಶುವಿಗೆ ಪ್ರತಿಯಾಗಿ ಈಡುಕೊಡಬೇಕು. ಅವನು ಈಡುಕೊಟ್ಟ ನಂತರ ಆ ಸತ್ತ ಪಶುವು ಅವನದಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಗುಂಡಿಯನ್ನು ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡು ಕೊಡಬೇಕು. ಎತ್ತಿನ ಯಜಮಾನನಿಗೆ ತೃಪ್ತಿಯಾಗುವಷ್ಟು ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.
Kannada BSI Bible 2016
ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕುಣಿ ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡುಕೊಡಬೇಕು. ಆ ದನದ ಒಡೆಯನಿಗೆ ಅದರ ಕ್ರಯವನ್ನು ಕೊಡಬೇಕು. ಸತ್ತ ದನವನ್ನು ತಾನೇ ತೆಗೆದುಕೊಳ್ಳಬಹುದು.
Kannada Bible (KNCL) BSI 2016
ಆ ಗುಣಿ ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡುಕೊಡಬೇಕು. ಆ ಪ್ರಾಣಿಯ ಒಡೆಯನಿಗೆ ಅದರ ಕ್ರಯವನ್ನು ಕೊಡಬೇಕು. ಸತ್ತ ಪ್ರಾಣಿಯನ್ನು ತಾನೇ ತೆಗೆದುಕೊಳ್ಳಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗುಂಡಿಯನ್ನು ಅಗೆದವನು ಈಡು ಕೊಡಬೇಕು. ಅವುಗಳ ಯಜಮಾನನಿಗೆ ಕ್ರಯ ನೀಡಬೇಕು. ಆದರೆ ಸತ್ತ ಪಶು ಅವನದಾಗಬೇಕು.