Exodus 21:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಒಬ್ಬನ ಎತ್ತು ಇನ್ನೊಬ್ಬನ ಎತ್ತನ್ನು ಹಾದು ಕೊಂದರೆ ಆಗ ಜೀವಂತವಾಗಿರುವ ಎತ್ತನ್ನು ಮಾರಬೇಕು. ಆ ಎತ್ತನ್ನು ಮಾರಿದ್ದರಿಂದ ಬಂದ ಹಣವನ್ನು ಸಮವಾಗಿ ಹಂಚಿಕೊಳ್ಳಬೇಕು. ಕೊಲ್ಲಲ್ಪಟ್ಟ ಎತ್ತನ್ನು ಸಮವಾಗಿ ಹಂಚಿಕೊಳ್ಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದು ಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನೂ ಇಬ್ಬರೂ ಸಮವಾಗಿ ಹಂಚಿಕೊಳ್ಳಬೇಕು.
Kannada BSI Bible 2016
ಇದಲ್ಲದೆ ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದುಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಪಾಲು ಹಂಚಬೇಕು. ಸತ್ತ ಎತ್ತನ್ನು ಸಹ ಪಾಲು ಹಂಚಬೇಕು.ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾದು ಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಸಮವಾಗಿ ಹಂಚಬೇಕು. ಸತ್ತ ಎತ್ತನ್ನು ಸಮವಾಗಿ ಹಂಚಬೇಕು.
Kannada Bible (KNCL) BSI 2016
ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ತಿವಿದುಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಸಮವಾಗಿ ಹಂಚಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದು ಕೊಂದರೆ, ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನೂ, ಸತ್ತ ಎತ್ತನ್ನೂ ಸರಿಯಾಗಿ ಇಬ್ಬರೂ ಪಾಲುಮಾಡಿಕೊಳ್ಳಬೇಕು.