Exodus 21:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಒಬ್ಬನ ಎತ್ತು ಮೊದಲೊಮ್ಮೆ ಇತರ ಪಶುಗಳಿಗೆ ಗಾಯಮಾಡಿದ್ದರೆ, ಅದರ ಮಾಲಿಕನು ಅದನ್ನು ಕಟ್ಟಿಹಾಕದೆ ಇದ್ದುದರ ನಿಮಿತ್ತ ತಪ್ಪಿತಸ್ಥನಾಗಿದ್ದಾನೆ. ಅವನು ಸತ್ತ ಎತ್ತಿಗೆ ಪ್ರತಿಯಾಗಿ ಸ್ವಂತ ಎತ್ತನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ಅದರ ಯಜಮಾನನಿಗೆ ತಿಳಿದಿದ್ದರೂ ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅವನು ಎತ್ತಿಗೆ ಪ್ರತಿಯಾಗಿ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.
Kannada BSI Bible 2016
ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅದಕ್ಕೆ ಮುಂಚಿತವಾಗಿ ಆ ಎತ್ತು ಹಾಯುವಂಥದೇ ಎಂದು ತಿಳಿದಿದ್ದಾಗ್ಯೂ ಅದರ ಒಡೆಯನು ಅದನ್ನು ಕಟ್ಟಿಹಾಕದೆ ಹೋದದ್ದಾದರೆ ಅವನು ಎತ್ತಿಗೆ ಪ್ರತಿಯಾಗಿ ಎತ್ತನ್ನು ಕೊಡಬೇಕು; ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.
Kannada Bible (KNCL) BSI 2016
ಆದರೆ ಅದಕ್ಕೆ ಮುಂಚಿತವಾಗಿಯೇ ಆ ಎತ್ತು ತಿವಿಯುವಂಥದ್ದೇ ಎಂದು ತಿಳಿದಿದ್ದರೂ ಅದರ ಒಡೆಯ ಅದನ್ನು ಕಟ್ಟಿಹಾಕದೆ ಹೋದದ್ದಾದರೆ ಅವನು ಎತ್ತಿಗೆ ಪ್ರತಿಯಾಗಿ ಎತ್ತನ್ನು ಕೊಡಬೇಕು; ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿದ್ದರೂ, ಅದರ ಯಜಮಾನನು ಅದನ್ನು ಕಟ್ಟಿಹಾಕದೆ ಹೋಗಿದ್ದರೆ, ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲುಕೊಡಬೇಕು. ಆದರೆ ಸತ್ತ ಪಶುವನ್ನು ಅವನು ತೆಗೆದುಕೊಳ್ಳಬಹುದು.