Exodus 21:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗುಲಾಮನು ಮದುವೆಯಾಗಿಲ್ಲದಿದ್ದರೆ, ಅವನ ಯಜಮಾನನು ಅವನಿಗೆ ಮದುವೆ ಮಾಡಿಸಬಹುದು. ಆ ಸ್ತ್ರೀಯು ಮಕ್ಕಳನ್ನು ಹೆತ್ತರೆ, ಆಕೆಯೂ ಆಕೆಯ ಮಕ್ಕಳೂ ಯಜಮಾನನ ಸ್ವತ್ತಾಗುವರು. ಗುಲಾಮನು ತನ್ನ ಸೇವಾ ವರ್ಷಗಳನ್ನು ಮುಗಿಸಿದ ತರುವಾಯ ಬಿಡುಗಡೆ ಹೊಂದುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಯಜಮಾನನು ಅವನಿಗೆ ಮದುವೆಮಾಡಿಸಿದ ಪಕ್ಷದಲ್ಲಿ ಆ ಹೆಂಡತಿಯಲ್ಲಿ ಗಂಡು ಇಲ್ಲವೆ ಹೆಣ್ಣುಮಕ್ಕಳು ಹುಟ್ಟಿದ್ದರೆ, ಆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನ ಸೊತ್ತಾಗುವರು. ದಾಸನು ಒಂಟಿಗನಾಗಿಯೇ ಹೊರಟುಹೋಗಬೇಕು.’”
Kannada BSI Bible 2016
ಅವನ ಯಜಮಾನನು ಅವನಿಗೆ ಕೊಟ್ಟ ಹೆಂಡತಿಯು ಅವನಿಗೆ ಕುಮಾರರನ್ನೂ ಕುಮಾರ್ತೆಯರನ್ನೂ ಹೆತ್ತಿದ್ದರೆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನವ ರಾಗಿರಬೇಕು. ಅವನು ಒಬ್ಬನಾಗಿಯೇ ಹೋಗಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಯಜಮಾನನು ಅವನಿಗೆ ಮದುವೆಮಾಡಿಸಿದ ಪಕ್ಷದಲ್ಲಿ ಆ ಹೆಂಡತಿಯಲ್ಲಿ ಗಂಡು ಇಲ್ಲವೆ ಹೆಣ್ಣು ಮಕ್ಕಳು ಹುಟ್ಟಿದ್ದರೆ ಆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನ ಸೊತ್ತಾಗುವರು; ದಾಸನು ಒಂಟಿಗನಾಗಿಯೇ ಹೊರಟುಹೋಗಬೇಕು.
Kannada Bible (KNCL) BSI 2016
ಅವನ ಯಜಮಾನ ಅವನಿಗೆ ಮದುವೆ ಮಾಡಿಸಿ ಆ ಹೆಂಡತಿಗೆ ಗಂಡು ಇಲ್ಲವೆ ಹೆಣ್ಣು ಮಕ್ಕಳಾಗಿದ್ದರೆ ಆ ಹೆಂಡತಿ ಹಾಗು ಅವಳ ಮಕ್ಕಳು ಯಜಮಾನನ ಸೊತ್ತಾಗುವರು. ಆ ಗುಲಾಮನು ಒಂಟಿಯಾಗಿಯೇ ಹೊರಟು ಹೋಗಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಯಜಮಾನನು ಅವನಿಗೆ ಮದುವೆಮಾಡಿಸಿ ಆ ಹೆಂಡತಿಗೆ ಗಂಡು ಇಲ್ಲವೆ ಹೆಣ್ಣುಮಕ್ಕಳು ಹುಟ್ಟಿದ್ದರೆ, ಆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನ ಸೊತ್ತಾಗುವರು. ಅವನು ಒಬ್ಬನಾಗಿಯೇ ಹೋಗಬೇಕು.