Exodus 21:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೆ ಒಂದುವೇಳೆ ಆ ಗುಲಾಮನು ತನ್ನ ಯಜಮಾನನ ಸಂಗಡವಿರಲು ದೃಢವಾಗಿ ಬಯಸಿದರೆ ಅವನು, ‘ನಾನು ನನ್ನ ಯಜಮಾನನನ್ನು ಪ್ರೀತಿಸುತ್ತೇನೆ. ನಾನು ನನ್ನ ಹೆಂಡತಿಯನ್ನೂ ಮಕ್ಕಳನ್ನೂ ಪ್ರೀತಿಸುತ್ತೇನೆ. ನಾನು ಬಿಡುಗಡೆ ಹೊಂದದೆ ಇಲ್ಲೇ ಇರುವೆನು’ ಎಂದು ಹೇಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ದಾಸನು, “ನಾನು ನನ್ನ ಯಜಮಾನನ್ನೂ, ನನ್ನ ಹೆಂಡತಿ ಮಕ್ಕಳನ್ನು ಪ್ರೀತಿಸುತ್ತೇನೆ. ಆದುದರಿಂದ ನಾನು ಬಿಡುಗಡೆಯಾಗಿ ಹೋಗುವುದಕ್ಕೆ ನನಗೆ ಮನಸಿಲ್ಲ” ಎಂದು ಸ್ಪಷ್ಟವಾಗಿ ಹೇಳಿದರೆ,
Kannada BSI Bible 2016
ಆದರೆ ದಾಸನು--ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿ ಮಾಡು ತ್ತೇನೆ. ಆದದರಿಂದ ನಾನು ಬಿಡುಗಡೆಯಾಗಿ ಹೋಗು ವದಕ್ಕೆ ಮನಸ್ಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆ ದಾಸನು - ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿ ಮಕ್ಕಳನ್ನೂ ಪ್ರೀತಿಸುತ್ತೇನಾದದರಿಂದ ಅವರನ್ನು ಅಗಲಿ ಬಿಡುಗಡೆಯಾಗಿ ಹೋಗಲೊಲ್ಲೆನೆಂದು ದೃಢವಾಗಿ ಹೇಳಿದರೆ
Kannada Bible (KNCL) BSI 2016
ಆದರೆ ಆ ಗುಲಾಮನು ತಾನು ತನ್ನ ಯಜಮಾನನನ್ನೂ ತನ್ನ ಮಡದಿ ಮಕ್ಕಳನ್ನೂ ಪ್ರೀತಿಸುತ್ತೇನೆ, ಈ ಕಾರಣ ಬಿಡುಗಡೆ ಹೊಂದಿ ಹೋಗಲು ಇಷ್ಟವಿಲ್ಲವೆಂದು ದೃಢವಾಗಿ ಹೇಳಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ದಾಸನು, ‘ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿಮಾಡುತ್ತೇನೆ. ಆದ್ದರಿಂದ ನಾನು ಬಿಡುಗಡೆಯಾಗಿ ಹೋಗುವುದಕ್ಕೆ ಮನಸ್ಸಿಲ್ಲ,’ ಎಂದು ಸ್ವಷ್ಟವಾಗಿ ಹೇಳಿದರೆ,