Exodus 21:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗಾದರೆ ಯಜಮಾನನು ಆ ಗುಲಾಮನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನನ್ನು ಬಾಗಿಲ ಬಳಿಗೆ ಅಥವಾ ಬಾಗಿಲಿನ ಮರದ ನಿಲುವುಪಟ್ಟಿಗಳ ಬಳಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನ ಕಿವಿಗೆ ಚೂಪಾದ ಸಲಾಕೆಯಿಂದ ರಂಧ್ರ ಮಾಡುವನು. ಆಗ ಗುಲಾಮನು ತನ್ನ ಜೀವಮಾನಪರ್ಯಂತ ಆ ಯಜಮಾನನಿಗೆ ಸೇವೆ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರೆದುಕೊಂಡು ಬಂದು ಬಾಗಿಲಿನ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಿ ಗುರುತು ಮಾಡಬೇಕು. ಆಗ ಅವನು ಶಾಶ್ವತವಾಗಿ ಅವನಿಗೆ ದಾಸನಾಗಿರುವನು.
Kannada BSI Bible 2016
ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರಕೊಂಡು ಬಂದು ಕದದ ಹತ್ತಿರ ಅಥವಾ ಬಾಗಲಿನ ನಿಲುವುಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ಸಲಾಕೆಯಿಂದ ಚುಚ್ಚಬೇಕು. ಆ ಹೊತ್ತಿನಿಂದ ಇವನು ಶಾಶ್ವತವಾಗಿ ಅವನಿಗೆ ದಾಸನಾಗಿರಬೇಕು.
Kannada Bible (KNCL) BSI 2016
ಆಗ ಅವನ ಯಜಮಾನ ಅವನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬಂದು ಕದದ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ದಬ್ಬಳದಿಂದ ಅವನ ಕಿವಿಚುಚ್ಚಬೇಕು. ಅಂದಿನಿಂದ ಯಜಮಾನನಿಗೆ ಶಾಶ್ವತ ಗುಲಾಮನಾಗಿರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು, ಬಾಗಿಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ, ಅವನ ಯಜಮಾನನು ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ದಾಸನಾಗಿರಬೇಕು.