Exodus 21:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬನು ತನ್ನ ಮಗಳನ್ನು ಗುಲಾಮಳನ್ನಾಗಿ ಮಾರಲು ತೀರ್ಮಾನಿಸಿದರೆ, ಆಕೆಯನ್ನು ಬಿಡುಗಡೆಗೊಳಿಸುವ ನಿಯಮಗಳು ಗುಲಾಮರಾದ ಪುರುಷರನ್ನು ಬಿಡುಗಡೆಗೊಳಿಸುವ ನಿಯಮಗಳ ಪ್ರಕಾರ ಇರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರಾದರೂ ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಬಾರದು.
Kannada BSI Bible 2016
ಒಬ್ಬನು ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ ದಾಸರು ಹೋಗುವಂತೆ ಆಕೆಯು ಹೋಗಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ತನ್ನ ಮಗಳನ್ನು ದಾಸಿಯಾಗುವದಕ್ಕೆ ಮಾರಿದರೆ ಪುರುಷರಾದ ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಕೂಡದು.
Kannada Bible (KNCL) BSI 2016
“ಯಾರಾದರು ತನ್ನ ಮಗಳನ್ನು ದಾಸಿಯಾಗುವುದಕ್ಕೆ ಮಾರಿದರೆ ಗಂಡು ಗುಲಾಮರು ಬಿಡುಗಡೆಯಾಗಿ ಹೋಗುವಂತೆ ಅವಳು ಬಿಡುಗಡೆಯಾಗಿ ಹೋಗಕೂಡದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಬ್ಬನು ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಹೋಗುವಂತೆ ಆಕೆಯು ಹೋಗಿಬಿಡಬಾರದು.