Exodus 22:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ನೆರೆಯವನು ಆ ಪಶುವನ್ನು ಕದ್ದಿಲ್ಲದ್ದಿದ್ದರೆ ತಾನು ಕದ್ದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಬೇಕು. ಪಶುವಿನ ಮಾಲಿಕನು ಈ ಪ್ರಮಾಣವನ್ನು ಸ್ವೀಕರಿಸಬೇಕು. ನೆರೆಯವನು ಮಾಲಿಕನಿಗೆ ಪಶುವಿಗಾಗಿ ಈಡು ಕೊಡಬೇಕಾಗಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮನುಷ್ಯನು ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲ ಎಂಬುದನ್ನು ದೃಢಪಡಿಸುವುದಕ್ಕಾಗಿ ಯೆಹೋವನ ಮೇಲೆ ಪ್ರಮಾಣಮಾಡಬೇಕು. ಆಗ ಪಶುವಿನ ಒಡೆಯನು ಆ ಪ್ರಮಾಣವಾಕ್ಯವನ್ನು ನಂಬಬೇಕು. ಪ್ರಮಾಣಮಾಡಿದವನು ಅದಕ್ಕೆ ಈಡುಕೊಡಬೇಕಾದ ಅಗತ್ಯವಿರುವುದಿಲ್ಲ.
Kannada BSI Bible 2016
ತಾನು ತನ್ನ ನೆರೆಯವನ ವಸ್ತುವನ್ನು ತೆಗೆದುಕೊಳ್ಳಲಿಲ್ಲವೆಂದು ಅವರಿಬ್ಬರ ಮಧ್ಯದಲ್ಲಿ ಕರ್ತನ ಮೇಲೆ ಪ್ರಮಾಣ ಮಾಡಬೇಕು. ಅದನ್ನು (ಪಶುವಿನ) ಯಜಮಾನನು ಒಪ್ಪಿದರೆ ಅವನು ಬದಲುಕೊಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮನುಷ್ಯನು ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸ ಮಾಡಲಿಲ್ಲವೆಂಬದನ್ನು ದೃಢಪಡಿಸುವದಕ್ಕೆ ಯೆಹೋವನ ಮೇಲೆ ಪ್ರಮಾಣಮಾಡಬೇಕು. ಪಶುವಿನ ಒಡೆಯನು ಆ ಪ್ರಮಾಣ ವಾಕ್ಯವನ್ನು ನಂಬಬೇಕು; ಪ್ರಮಾಣ ಮಾಡಿದವನು ಈಡುಕೊಡಬೇಕಾದ ಅಗತ್ಯವಿಲ್ಲ.
Kannada Bible (KNCL) BSI 2016
ಆ ವ್ಯಕ್ತಿ ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲವೆಂಬುದನ್ನು ದೃಢಪಡಿಸಲು ಸರ್ವೇಶ್ವರನ ಮೇಲೆ ಪ್ರಮಾಣ ಮಾಡಬೇಕು. ಪ್ರಾಣಿಯ ಒಡೆಯನು ಆ ಪ್ರಮಾಣ ವಾಕ್ಯವನ್ನು ನಂಬಬೇಕು. ಪ್ರಮಾಣ ಮಾಡುವವನು ಈಡು ಕೊಡಬೇಕಾದ ಅಗತ್ಯವಿರುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಾನು ತನ್ನ ನೆರೆಯವನ ವಸ್ತುವನ್ನು ತೆಗೆದುಕೊಳ್ಳಲಿಲ್ಲವೆಂದು ಅವರಿಬ್ಬರ ಮಧ್ಯದಲ್ಲಿ ಯೆಹೋವ ದೇವರ ಮುಂದೆ ಪ್ರಮಾಣಮಾಡಬೇಕು. ಅದನ್ನು ಪಶುವಿನ ಯಜಮಾನನು ಒಪ್ಪಿದರೆ ಅವನು ಈಡುಕೊಡಬಾರದು.