Exodus 22:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅದರ ಮಾಲಿಕನು ಪಶುವಿನೊಂದಿಗೆ ಅಲ್ಲಿದ್ದರೆ ಆಗ ನೆರೆಯವನು ಈಡುಕೊಡಬೇಕಾಗಿಲ್ಲ. ನೆರೆಯವನು ಪಶುವನ್ನು ಬಾಡಿಗೆಗೆ ತೆಗೆದುಕೊಂಡಿರುವಾಗ ಆ ಪಶು ಸತ್ತರೆ ಅಥವಾ ಅದಕ್ಕೆ ಪೆಟ್ಟಾದರೆ ಅವನು ಈಡುಕೊಡಬೇಕಾಗಿಲ್ಲ. ಆ ಪಶುವನ್ನು ಉಪಯೋಗಿಸಲು ಅವನು ಕೊಟ್ಟ ಬಾಡಿಗೆಯೇ ಸಾಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಜಮಾನನು ಅದರ ಹತ್ತಿರದಲ್ಲೇ ಇದಿದ್ದರೆ, ಅವನಿಗೆ ಈಡುಕೊಡಬೇಕಾದ ಅಗತ್ಯವಿಲ್ಲ. ಅದನ್ನು ಬಾಡಿಗೆಗೆ ತೆಗೆದುಕೊಂಡಿದ್ದರೆ ಅದಕ್ಕೆ ಉಂಟಾದ ನಷ್ಟವು ಬಾಡಿಗೆಯ ಲೆಕ್ಕಕ್ಕೆ ಎಣಿಕೆಯಾಗಬೇಕು.
Kannada BSI Bible 2016
ಆದರೆ ಯಜಮಾನನು ಅದರ ಸಂಗಡ ಇದ್ದರೆ ಬದಲು ಕೊಡದೆ ಇರಲಿ. ಅದು ಬಾಡಿಗೆಗೆ ತಂದಿದ್ದರೆ ಅದರ ಬಾಡಿಗೆಯಲ್ಲಿಯೇ ಬಂದಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಡೆಯನು ಅದರ ಹತ್ತಿರದಲ್ಲೇ ಇದ್ದರೆ ಅವನಿಗೆ ಈಡುಕೊಡಬೇಕಾದ ಅಗತ್ಯವಿಲ್ಲ. ಅದನ್ನು ಬಾಡಿಗೆಗೆ ತೆಗೆದುಕೊಂಡ ಪಕ್ಷಕ್ಕೆ ಅದಕ್ಕೆ ಉಂಟಾದ ನಷ್ಟವು ಬಾಡಿಗೆಯ ಲೆಕ್ಕಕ್ಕೆ ಎಣೆಕೆಯಾಗಿರಬೇಕು.
Kannada Bible (KNCL) BSI 2016
ಒಡೆಯನು ಅದರ ಹತ್ತಿರದಲ್ಲೇ ಇದ್ದರೆ ಅವನಿಗೆ ಈಡು ಕೊಡಬೇಕಾದ ಅವಶ್ಯಕತೆ ಇಲ್ಲ. ಅದನ್ನು ಬಾಡಿಗೆಗೆ ತೆಗೆದುಕೊಂಡಿದ್ದರೆ ಅದಕ್ಕೆ ಉಂಟಾದ ನಷ್ಟವು ಬಾಡಿಗೆಯ ಲೆಕ್ಕಕ್ಕೆ ಎಣಿಕೆಯಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅದರ ಯಜಮಾನನು ಅದರ ಸಂಗಡ ಇದ್ದರೆ ಈಡು ಕೊಡದೆಯಿರಲಿ. ಅದು ಬಾಡಿಗೆಗೆ ತಂದಿದ್ದರೆ ಅದರ ಬಾಡಿಗೆಯಲ್ಲಿಯೇ ಎಣಿಕೆಯಾಗಲಿ.