Exodus 22:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೆಂದರೆ ಅವನಿಗೆ ಬೇರೆ ಯಾವ ಹೊದಿಕೆಯೂ ಇಲ್ಲ; ಅದನ್ನೇ ಅವನು ಧರಿಸಿಕೊಳ್ಳಬೇಕು. ಅವನು ಮಲಗಿಕೊಳ್ಳುವಾಗ ಚಳಿಯಿಂದ ನನಗೆ ಮೊರೆಯಿಟ್ಟರೆ, ನಾನು ಅವನ ಮೊರೆಯನ್ನು ಕೇಳಿ ಅವನಿಗೆ ದಯೆತೋರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಬೇರೆ ಯಾವುದನ್ನು ಹೊದ್ದುಕೊಂಡು ಮಲಗಬೇಕು? ಅವನು ನನಗೆ ಮೊರೆಯಿಟ್ಟರೆ ನಾನು ಕಿವಿಗೊಟ್ಟು ಕೇಳುವೆನು. ಏಕೆಂದರೆ ನಾನು ದಯಾಪರನು.
Kannada BSI Bible 2016
ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ಬೇರೆ ಯಾವ ಹೊದಿಕೆಯಿಲ್ಲವಲ್ಲಾ; ಅದನ್ನೇ ಮೈಗೆ ಕಟ್ಟಿಕೊಳ್ಳಬೇಕು; ಬೇರೆ ಯಾವದನ್ನು ಸುತ್ತಿಕೊಂಡು ಮಲಗಾನು? ಅವನು ನನಗೆ ಮೊರೆಯಿಟ್ಟರೆ ಕೇಳುವೆನು; ನಾನು ದಯಾಪರನೇ.
Kannada Bible (KNCL) BSI 2016
ಏಕೆಂದರೆ ಅವನಿಗಿರುವ ಹೊದಿಕೆ ಅದೊಂದೇ; ಅದನ್ನೇ ಮೈಗೆ ಸುತ್ತಿಕೊಳ್ಳಬೇಕು; ಬೇರೆ ಯಾವುದನ್ನು ಹೊದ್ದುಕೊಂಡು ಮಲಗಾನು? ಅವನು ನನಗೆ ಮೊರೆಯಿಟ್ಟರೆ ಕಿವಿಗೊಡುವೆನು. ಏಕೆಂದರೆ ನಾನು ದಯಾಮಯನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವುದನ್ನು ಹೊದ್ದುಕೊಂಡು ಮಲಗಿಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ಏಕೆಂದರೆ ನಾನು ಅನುಕಂಪ ಉಳ್ಳವನು.