Exodus 22:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಸುಗ್ಗಿಕಾಲದಲ್ಲಿ ನೀವು ಪ್ರಥಮಫಲವಾದ ಧಾನ್ಯವನ್ನು ಮತ್ತು ನಿಮ್ಮ ಪ್ರಥಮಫಲವಾದ ದ್ರಾಕ್ಷಾರಸವನ್ನು ನನಗೆ ಕೊಡಬೇಕು. ನೀವು ಅದನ್ನು ನಿಮಗಾಗಿಯೇ ಇಟ್ಟುಕೊಳ್ಳಬಾರದು. “ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಪ್ರತಿಷ್ಠಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.
Kannada BSI Bible 2016
ನಿನ್ನ ಪ್ರಥಮ ಫಲಗಳನ್ನೂ ಪಾನಗಳನ್ನೂ ನನಗೆ ಅರ್ಪಿಸಲು ತಡ ಮಾಡಬೇಡ. ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಕೊಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಣದಿಂದಲೂ ಆಲೆಯಿಂದಲೂ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವದಕ್ಕೆ ತಡ ಮಾಡಬಾರದು. ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಸಮರ್ಪಿಸಬೇಕು.
Kannada Bible (KNCL) BSI 2016
“ನಿಮ್ಮ ಕಣದಿಂದ ಹಾಗು ಆಲೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸಲು ತಡಮಾಡಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿನ್ನ ಧಾನ್ಯಗಳನ್ನೂ ಪಾನಗಳನ್ನೂ ನನಗೆ ಅರ್ಪಿಸುವುದಕ್ಕೆ ತಡಮಾಡಬೇಡ. “ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಮೀಸಲಾಗಿಡಬೇಕು.