Exodus 22:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಾತ್ರವಲ್ಲದೆ, ನಿಮ್ಮ ಕುರಿದನಗಳಲ್ಲಿ ಚೊಚ್ಚಲಾದವುಗಳನ್ನು ನನಗೆ ಅರ್ಪಿಸಬೇಕು. ಚೊಚ್ಚಲಾದವುಗಳು ತನ್ನ ತಾಯಿಯೊಂದಿಗೆ ಏಳು ದಿನಗಳಿರಲಿ. ಬಳಿಕ, ಎಂಟನೆಯ ದಿನದಲ್ಲಿ ನೀವು ಅದನ್ನು ನನಗೆ ಅರ್ಪಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಂತೆಯೇ ನಿಮ್ಮ ಕುರಿ, ದನಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳು ದಿನಗಳ ಕಾಲ ಆ ಮರಿ ತನ್ನ ತಾಯಿಯೊಂದಿಗಿರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.
Kannada BSI Bible 2016
ಅದರಂತೆಯೇ ನಿನ್ನ ಎತ್ತುಗಳ ಲ್ಲಿಯೂ ಕುರಿಗಳಲ್ಲಿಯೂ ಮಾಡಬೇಕು. ಅದು ಏಳು ದಿನ ತಾಯಿಯ ಬಳಿಯಲ್ಲಿರಲಿ, ಎಂಟನೆಯ ದಿನ ಅದನ್ನು ನನಗೆ ಕೊಡಬೇಕು.ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಹೊಲದಲ್ಲಿ (ಮೃಗದಿಂದ) ಕೊಲ್ಲಲ್ಪಟ್ಟದ್ದನ್ನು ನೀವು ತಿನ್ನದೆ ಅದನ್ನು ನಾಯಿಗಳಿಗೆ ಹಾಕಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಮೇರೆಗೆ ನಿಮ್ಮ ಕುರಿದನಗಳ ಚೊಚ್ಚಲುಮರಿಗಳನ್ನು ನನಗೆ ಸಮರ್ಪಿಸಬೇಕು. ಏಳು ದಿವಸ ಆ ಮರಿ ತಾಯಿಯ ಹತ್ತಿರ ಇರಲಿ; ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.
Kannada Bible (KNCL) BSI 2016
“ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಸಮರ್ಪಿಸಬೇಕು. ಅಂತೆಯೇ ನಿಮ್ಮ ದನಕುರಿಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳುದಿವಸ ಆ ಮರಿ ತಾಯಿಯ ಹತ್ತಿರ ಇರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರಂತೆಯೇ ನಿಮ್ಮ ದನಕುರಿಗಳನ್ನೂ ನನಗೆ ಸಮರ್ಪಿಸಬೇಕು. ಅದು ಏಳು ದಿನಗಳು ತಾಯಿಯ ಬಳಿಯಲ್ಲಿರಲಿ, ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.