Exodus 22:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬನು ತನ್ನ ಹೊಲದಲ್ಲಾಗಲಿ ದ್ರಾಕ್ಷಿತೋಟದಲ್ಲಾಗಲಿ ತನ್ನ ಪಶುವಿಗೆ ಮೇಯಲು ಬಿಡಬಹುದು. ಆದರೆ ಅದು ಅವನ ನೆರೆಯವನ ಹೊಲವನ್ನಾಗಲಿ, ದ್ರಾಕ್ಷಿತೋಟವನ್ನಾಗಲಿ ಹಾಳು ಮಾಡಿದರೆ, ಅವನು ತನ್ನ ನೆರೆಯವನಿಗೆ ಉಂಟಾದ ನಷ್ಟಕ್ಕೆ ಪ್ರತಿಯಾಗಿ ತನ್ನ ಉತ್ತಮ ಬೆಳೆಗಳನ್ನು ಕೊಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನು ತನ್ನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ತನ್ನ ದನಗಳನ್ನು ಮೇಯಿಸಿ, ಮತ್ತೊಬ್ಬನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ಮೇಯುವಂತೆ ಮಾಡಿದರೆ, ತನ್ನ ಹೊಲದ ಅಥವಾ ದ್ರಾಕ್ಷಿತೋಟದ ಉತ್ತಮ ಭಾಗವನ್ನು ಅವನಿಗೆ ಈಡು ಕೊಡಬೇಕು.
Kannada BSI Bible 2016
ಒಬ್ಬನು ಇನ್ನೊಬ್ಬನ ಹೊಲದಲ್ಲಿ ತನ್ನ ಪಶುಗಳನ್ನು ಬಿಟ್ಟು ಬೆಳೆಯನ್ನೂ ದ್ರಾಕ್ಷೇತೋಟವನ್ನೂ ಮೇಯಿಸಿ ದರೆ ಅವನು ತನ್ನ ಸ್ವಂತ ಹೊಲದ ಉತ್ತಮ ಭಾಗವನ್ನೂ ದ್ರಾಕ್ಷೇತೋಟದಲ್ಲಿ ಉತ್ತಮವಾದದ್ದನ್ನೂ ಬದಲು ಕೊಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು ತನ್ನ ಹೊಲದಲ್ಲಾಗಲಿ ದ್ರಾಕ್ಷೇತೋಟದಲ್ಲಾಗಲಿ ದನಗಳನ್ನು ಮೇಯಿಸಿ ಅವು ಮತ್ತೊಬ್ಬನ ಹೊಲಕ್ಕೂ ಹೋಗಿ ಮೇಯುವಂತೆ ಮಾಡಿದರೆ ತನ್ನ ಹೊಲದ ಅಥವಾ ದ್ರಾಕ್ಷೇತೋಟದ ಉತ್ತಮಭಾಗದಲ್ಲಿ ಅವನಿಗೆ ಈಡುಕೊಡಬೇಕು.
Kannada Bible (KNCL) BSI 2016
“ಒಬ್ಬನು ತನ್ನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ದನಗಳನ್ನು ಮೇಯಿಸಿ ಅವು ಮತ್ತೊಬ್ಬನ ಹೊಲಕ್ಕೆ ಹೋಗಿ ಮೇಯುವಂತೆ ಮಾಡಿದರೆ, ತನ್ನ ಹೊಲದ ಅಥವಾ ದ್ರಾಕ್ಷಿತೋಟದ ಉತ್ತಮ ಫಸಲಿನಿಂದ ಅವನಿಗೆ ಈಡು ಕೊಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಬ್ಬನು ಇನ್ನೊಬ್ಬನ ಹೊಲದಲ್ಲಿ ತನ್ನ ಪಶುಗಳನ್ನು ಬಿಟ್ಟು ಬೆಳೆಯನ್ನೂ, ದ್ರಾಕ್ಷಿ ತೋಟವನ್ನೂ ಮೇಯಿಸಿದರೆ, ಅವನು ತನ್ನ ಸ್ವಂತ ಹೊಲದ ಉತ್ತಮ ಭಾಗವನ್ನೂ, ದ್ರಾಕ್ಷಿ ತೋಟದಲ್ಲಿನ ಉತ್ತಮವಾದದ್ದನ್ನೂ ಈಡು ಕೊಡಬೇಕು.