Exodus 22:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀವು ಕಳ್ಳನನ್ನು ಕಂಡುಹಿಡಿಯಲಾಗದಿದ್ದರೆ, ಆ ಮನೆಯ ಮಾಲಿಕನು ತಪ್ಪಿತಸ್ಧನಾಗಿದ್ದಾನೋ ಇಲ್ಲವೋ ಎಂದು ದೇವರು ನಿರ್ಣಯಿಸುವನು. ಮನೆಯ ಮಾಲಿಕನು ದೇವರ ಸನ್ನಿಧಿಗೆ ಹೋಗಬೇಕು. ಅವನು ಕದ್ದಿದ್ದಾನೋ ಇಲ್ಲವೋ ಎಂದು ದೇವರು ತೀರ್ಮಾನಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಳ್ಳನು ಸಿಕ್ಕದೇ ಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ದೃಢಪಡಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
Kannada BSI Bible 2016
ಕಳ್ಳನು ಸಿಕ್ಕದೆ ಹೋದರೆ ಮನೆಯ ಯಜಮಾನನು ತನ್ನ ನೆರೆಯವನ ಸಾಮಾನುಗಳನ್ನು ಅವನು ಮುಟ್ಟಲಿಲ್ಲ ವೆಂದು ವಿಚಾರಿಸುವದಕ್ಕೆ ನ್ಯಾಯಾಧಿಪತಿಗಳ ಬಳಿಗೆ ಅವನನ್ನು ಬರಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಳ್ಳನು ಸಿಕ್ಕದೆಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಏನೋ ಎಂಬದನ್ನು ನಿಶ್ಚಯಿಸುವದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
Kannada Bible (KNCL) BSI 2016
ಕಳ್ಳನು ಸಿಕ್ಕದೆ ಹೋದರೆ ಆ ಮನೆಯ ಯಜಮಾನ ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ನಿಶ್ಚಯಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಳ್ಳನು ಸಿಕ್ಕದೆ ಹೋದರೆ ಮನೆಯ ಯಜಮಾನನು ತನ್ನ ನೆರೆಯವನ ವಸ್ತುಗಳನ್ನು ಅವನು ಮುಟ್ಟಲಿಲ್ಲವೆಂದು ವಿಚಾರಿಸುವುದಕ್ಕೆ ದೇವರ ಸನ್ನಿಧಿಯಲ್ಲಿ ಅವನನ್ನು ಹಾಜರುಪಡಿಸಬೇಕು.