Exodus 23:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇದಲ್ಲದೆ ನೀವು ಸುಗ್ಗಿಯ ಜಾತ್ರೆಯನ್ನು ಆಚರಿಸಬೇಕು. ನೀವು ಬಿತ್ತಿದ ಹೊಲಗಳಲ್ಲಿ ಬೆಳೆಗಳನ್ನು ಕೊಯ್ಯುವ ಕಾಲದಲ್ಲಿ ಈ ಜಾತ್ರೆಯು ಆರಂಭವಾಗುವುದು. “ಇದಲ್ಲದೆ ಫಲಸಂಗ್ರಹ ಜಾತ್ರೆಯನ್ನೂ ನೀವು ಆಚರಿಸಬೇಕು. ವರ್ಷಾಂತ್ಯದಲ್ಲಿ ನೀವು ಹೊಲತೋಟಗಳ ಬೆಳೆಗಳನ್ನೆಲ್ಲಾ ಒಟ್ಟುಗೂಡಿಸುವ ಕಾಲದಲ್ಲಿ ಇದು ಆರಂಭವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ಹೊಲ ತೋಟಗಳ ಬೆಳೆಯನ್ನೂ ಕೂಡಿಸುವಾಗ ಅಂದರೆ ವರ್ಷದ ಕೊನೆಯಲ್ಲಿ ಸುಗ್ಗಿ ಹಬ್ಬವನ್ನು ಆಚರಿಸಬೇಕು.
Kannada BSI Bible 2016
ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಜಾತ್ರೆಯನ್ನೂ ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ ವರುಷದ ಕೊನೆಯಲ್ಲಿ ಫಲಸಂಗ್ರಹ ಜಾತ್ರೆಯನ್ನೂ ಆಚರಿಸಬೇಕು.
Kannada Bible (KNCL) BSI 2016
“ಅಲ್ಲದೆ ನೀವು ಬಿತ್ತನೆ ಮಾಡಿದ ಹೊಲಗದ್ದೆಗಳಲ್ಲಿ ಮೊದಲನೆಯ ಫಲ ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ವರ್ಷದ ಕೊನೆಯಲ್ಲಿ ಅಂದರೆ ಹೊಲ ತೋಟಗಳಿಂದ ನೀವು ಬೆಳೆಯನ್ನು ಕೂಡಿಸುವಾಗ, ಸುಗ್ಗಿಯ (ಫಲಸಂಗ್ರಹದ) ಹಬ್ಬವನ್ನು ಆಚರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಬಿತ್ತಿದ ಹೊಲದಲ್ಲಿ ಪ್ರಥಮ ಫಲವು ದೊರೆತಾಗ ಸುಗ್ಗಿ ಹಬ್ಬವನ್ನು ಆಚರಿಸಬೇಕು. “ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ, ವರ್ಷದ ಕೊನೆಯಲ್ಲಿ ಫಲಸಂಗ್ರಹದ ಹಬ್ಬವನ್ನು ಆಚರಿಸಬೇಕು.