Exodus 23:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಸುಗ್ಗಿ ಕಾಲದಲ್ಲಿ ನಿಮ್ಮ ಬೆಳೆಯ ಫಲವನ್ನು ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ತರಬೇಕು. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.
Kannada BSI Bible 2016
ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಉತ್ಕೃಷ್ಟವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.
Kannada Bible (KNCL) BSI 2016
“ನಿಮ್ಮ ಬೆಳೆಯ ಪ್ರಥಮ ಫಲದಲ್ಲಿ ಅತಿಶ್ರೇಷ್ಠವಾದುದ್ದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. \ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಅತ್ಯುತ್ತಮವಾದದ್ದನ್ನು ನಿಮ್ಮ ಯೆಹೋವ ದೇವರ ಆಲಯಕ್ಕೆ ತರಬೇಕು. “ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.