Exodus 23:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಇಗೋ, ನಿಮ್ಮ ಮುಂದೆ ನಾನು ಒಬ್ಬ ದೂತನನ್ನು ಕಳುಹಿಸುತ್ತಿದ್ದೇನೆ. ನಾನು ನಿಮಗಾಗಿ ಸಿದ್ಧಮಾಡಿದ ಸ್ಥಳಕ್ಕೆ ಈ ದೂತನು ನಿಮ್ಮನ್ನು ಮುನ್ನಡೆಸುವನು; ದಾರಿಯುದ್ದಕ್ಕೂ ಸಂರಕ್ಷಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೂ, ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೂ ದೂತನನ್ನು ನಿಮ್ಮ ಮುಂದಾಗಿ ಕಳುಹಿಸಿದ್ದೇನೆ.
Kannada BSI Bible 2016
ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ದಾರಿಯಲ್ಲಿ ನಿಮ್ಮನ್ನು ಕಾಪಾಡುವದಕ್ಕೂ ನಾನು ಗೊತ್ತುಮಾಡಿರುವ ಸ್ಧಳಕ್ಕೆ ಕರತರುವದಕ್ಕೂ ದೂತನನ್ನು ನಿಮ್ಮ ಮುಂದುಗಡೆಯಲ್ಲಿ ಕಳುಹಿಸುತ್ತೇನೆ.
Kannada Bible (KNCL) BSI 2016
“ಇಗೋ, ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೆ ಹಾಗು ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆದುತರುವುದಕ್ಕೆ ಒಬ್ಬ ದೂತನನ್ನು ನಿಮ್ಮ ಮುಂದೆ ಕಳಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವುದಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರವೂ ನಾನು ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.