Exodus 23:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಹೇಳುವ ಪ್ರತಿಯೊಂದಕ್ಕೆ ನೀವು ವಿಧೇಯರಾಗಬೇಕು. ನನ್ನ ಆಜ್ಞೆಗಳನ್ನೆಲ್ಲಾ ನೀವು ಅನುಸರಿಸಬೇಕು. ಆಗ ನಾನು ನಿಮ್ಮ ಸಂಗಡ ಇರುವೆನು. ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿರುವೆನು; ನಿಮಗೆ ಕೇಡುಮಾಡುವವರಿಗೆಲ್ಲಾ ಕೇಡುಮಾಡುವೆನು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಆತನ ಮಾತುಗಳನ್ನು ಶ್ರದ್ಧೆಯಿಂದ ಆಲಿಸಿ ನನ್ನ ಆಜ್ಞೆಗಳ ಪ್ರಕಾರ ನಡೆದುಕೊಂಡರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ, ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.
Kannada BSI Bible 2016
ಆತನ ಮಾತಿಗೆ ನೀವು ನಿಜವಾಗಿಯೂ ವಿಧೇಯ ರಾಗಿ ಹೇಳಿದ್ದನ್ನೆಲ್ಲಾ ನೀವು ಮಾಡಿದರೆ ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ವಿರೋಧಿ ಯಾಗಿಯೂ ನಾನು ಇರುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಆತನ ಮಾತನ್ನು ಶ್ರದ್ಧೆಯಿಂದ ಲಾಲಿಸಿ ನನ್ನ ಆಜ್ಞೆಗಳನ್ನೆಲ್ಲಾ ನಡಿಸಿದರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.
Kannada Bible (KNCL) BSI 2016
ನೀವು ಆತನ ಮಾತನ್ನು ಶ್ರದ್ಧೆಯಿಂದ ಆಲಿಸಿ, ನನ್ನ ಆಶೆಗಳನ್ನೆಲ್ಲ ಪಾಲಿಸಿದರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಮಾತಿಗೆ ನೀವು ನಿಜವಾಗಿಯೂ ವಿಧೇಯರಾಗಿ ನಾನು ಹೇಳಿದ್ದನ್ನೆಲ್ಲಾ ನೀವು ಮಾಡಿದರೆ, ನಿಮ್ಮ ಶತ್ರುಗಳಿಗೆ ನಾನು ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ನಾನು ವಿರೋಧಿಯಾಗಿಯೂ ಇರುವೆನು.