Exodus 23:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮ್ಮ ಮುಂದೆ ಹೆದ್ದುಂಬಿಯನ್ನು ಕಳುಹಿಸುವೆನು. ನಿಮ್ಮ ವೈರಿಗಳಾದ ಹಿವ್ವಿಯರನ್ನು ಕಾನಾನ್ಯರನ್ನು ಮತ್ತು ಹಿತ್ತಿಯರನ್ನು ಅದು ಬಲವಂತದಿಂದ ಅಟ್ಟಿಬಿಡುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ಕಡಜದ ಹುಳಗಳನ್ನು ನಿಮಗೆ ಮುಂಚಿತವಾಗಿ ಕಳುಹಿಸಿ ಹಿವ್ವಿಯರು, ಕಾನಾನ್ಯರು, ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವಂತೆ ಮಾಡುವೆನು.
Kannada BSI Bible 2016
ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಕಡಜದ ಹುಳಗಳನ್ನು ನಿಮ್ಮ ಮುಂಚಿತವಾಗಿ ಕಳುಹಿಸುವೆನು; ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವವು.
Kannada Bible (KNCL) BSI 2016
ನಿಮಗೆ ಮುಂಚಿತವಾಗಿ ಕಣಜದ ಹುಳುಗಳನ್ನು ಕಳಿಸುವೆನು. ಅವು, ಆ ಹಿವ್ವಿಯರು, ಕಾನಾನ್ಯರು ಹಾಗೂ ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಓಡಿಸಿ ಬಿಡುವವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಿವ್ವಿಯರು, ಕಾನಾನ್ಯರು ಮತ್ತು ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳಹಿಸುವೆನು.