Exodus 23:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ದೇಶದಲ್ಲಿ ವಾಸಿಸಲು ಅವರನ್ನು ಬಿಡಬೇಡಿರಿ. ಇಲ್ಲವಾದರೆ ಅವರು ನಿಮ್ಮಲ್ಲಿ ದ್ರೋಹ ಬುದ್ಧಿಯನ್ನು ಹುಟ್ಟಿಸಬಹುದು. ನೀವು ಅವರ ದೇವರುಗಳನ್ನು ಪೂಜಿಸಿದರೆ ಆ ಪೂಜೆಯೂ ನಿಮಗೆ ಉರುಲಾಗುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನಿಮ್ಮ ದೇಶದಲ್ಲೇ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರುದ್ಧವಾಗಿ ನೀವು ಪಾಪ ಮಾಡುವಂತೆ ಅವರು ಪ್ರೇರೇಪಿಸುವರು. ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವುದು.
Kannada BSI Bible 2016
ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನಿಮ್ಮ ದೇಶದಲ್ಲೇ ವಾಸವಾಗಿರಬಾರದು; ವಾಸವಾಗಿದ್ದರೆ ನನಗೆ ವಿರೋಧವಾಗಿ ನಿಮ್ಮಲ್ಲಿ ದ್ರೋಹಬುದ್ಧಿಯನ್ನು ಹುಟ್ಟಿಸಾರು; ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವದು.
Kannada Bible (KNCL) BSI 2016
ಅವರು ನಿಮ್ಮ ನಾಡಿನಲ್ಲಿ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರೋಧವಾಗಿ ನಿಮ್ಮಲ್ಲಿ ದ್ರೋಹಬುದ್ಧಿಯನ್ನು ಹುಟ್ಟಿಸಬಹುದು. ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯೆ ನಿಮಗೆ ಉರುಲಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನಗೆ ವಿರೋಧವಾಗಿ ನೀವು ಪಾಪಮಾಡದಂತಾಗಬೇಕಾದರೆ, ಅವರು ನಿಮ್ಮ ದೇಶದಲ್ಲಿ ವಾಸವಾಗಿರಬಾರದು. ಏಕೆಂದರೆ ನೀವು ಅವರ ದೇವರುಗಳನ್ನು ಆರಾಧಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವುದು.”