Exodus 23:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಕಳೆದುಹೋದ ಎತ್ತನ್ನಾಗಲಿ ಕತ್ತೆಯನ್ನಾಗಲಿ ನೋಡಿದರೆ, ಆಗ ನೀವು ಅದನ್ನು ಅದರ ಮಾಲಿಕನಿಗೆ ಹಿಂತಿರುಗಿಸಬೇಕು. ಒಂದುವೇಳೆ ಆ ಮಾಲಿಕನು ನಿಮ್ಮ ವೈರಿಯಾಗಿದ್ದರೂ ನೀವು ಈ ಕಾರ್ಯವನ್ನು ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ವೈರಿಯ ಎತ್ತಾಗಲಿ, ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗಿರಲಾಗಿ ಅದು ನಿನಗೆ ಸಿಕ್ಕಿದರೆ ಅದನ್ನು ಅವನ ಬಳಿಗೆ ಹೋಗಿ ಒಪ್ಪಿಸಬೇಕು.
Kannada BSI Bible 2016
ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗಿರಲಾಗಿ ಅದು ನಿನಗೆ ಸಿಕ್ಕಿದರೆ ಅದನ್ನು ಅವನ ಬಳಿಗೆ ಹೊಡಕೊಂಡು ಹೋಗಿ ಒಪ್ಪಿಸಬೇಕು.
Kannada Bible (KNCL) BSI 2016
“ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ತಿರುಗಾಡುವಾಗ ಅದು ನಿನಗೆ ಸಿಕ್ಕಿದರೆ ಅದನ್ನು ಅವನ ಬಳಿಗೆ ಹೊಡೆದುಕೊಂಡು ಹೋಗಿ ಒಪ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ವೈರಿಯ ಎತ್ತಾಗಲಿ, ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ, ಅದು ನಿಮಗೆ ಸಿಕ್ಕಿದರೆ ನೀವು ಅದನ್ನು ಖಂಡಿತವಾಗಿ ತಿರುಗಿ ಅವನಿಗೆ ತಂದುಕೊಡಬೇಕು.