Exodus 23:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಬಹು ತೂಕದ ಹೊರೆಯಿಂದ ನಡೆಯಲಾಗದೆ ಬಿದ್ದಿರುವ ಕತ್ತೆಯನ್ನು ನೀವು ನೋಡಿದರೆ ಅದನ್ನು ಎಬ್ಬಿಸಲು ನೀವು ನಿಂತು ಸಹಾಯ ಮಾಡಬೇಕು. ಆ ಕತ್ತೆಯು ನಿಮ್ಮ ವೈರಿಯದಾಗಿದ್ದರೂ ನೀವು ಅದಕ್ಕೆ ಸಹಾಯ ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನನ್ನು ಹಗೆಮಾಡುವವನ ಕತ್ತೆಯ ಹೊರೆಯ ಕೆಳಗೆ ಬಿದ್ದಿರುವುದನ್ನು ಕಂಡರೆ, ಅದನ್ನು ಎಬ್ಬಿಸುವುದಕ್ಕೆ ಮನಸ್ಸಿಲ್ಲದಿದ್ದರೂ ಅವನಿಗೆ ಸಹಾಯ ಮಾಡಿ ಎಬ್ಬಿಸಲೇಬೇಕು.
Kannada BSI Bible 2016
ನಿನ್ನನ್ನು ಹಗೆ ಮಾಡುವವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ನೀನು ಕಂಡಾಗ ಅವನಿಗೆ ಸಹಾಯ ಮಾಡಲು ಮನಸ್ಸಿಲ್ಲದಿದ್ದರೂ ನೀನು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಹಗೆಯವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ಕಂಡರೆ ಅದನ್ನು ಎಬ್ಬಿಸುವದಕ್ಕೆ ಮನಸ್ಸಿಲ್ಲದೆ ಹೋದಾಗ್ಯೂ ಅವನಿಗೆ ಸಹಾಯಮಾಡಿ ಎಬ್ಬಿಸಲೇಬೇಕು.
Kannada Bible (KNCL) BSI 2016
ನಿನ್ನ ಹಗೆಯವನ ಕತ್ತೆ ಹೊರೆಯನ್ನು ತಾಳದೆ ಕೆಳಗೆ ಬಿದ್ದಿರುವುದನ್ನು ಕಂಡರೆ ಅದನ್ನು ಎಬ್ಬಿಸುವುದಕ್ಕೆ ನಿನಗೆ ಮನಸ್ಸಿಲ್ಲದಿದ್ದರೂ ಅವನಿಗೆ ಸಹಾಯ ಮಾಡಿ ಅದನ್ನು ಎಬ್ಬಿಸಲೇ ಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮನ್ನು ಹಗೆ ಮಾಡುವವನ ಕತ್ತೆಯು ತನ್ನ ಹೊರೆಯ ಕೆಳಗೆ ಬಿದ್ದಿರುವುದನ್ನು ನೀವು ಕಂಡಾಗ, ಅವನಿಗೆ ಸಹಾಯ ಮಾಡುವುದಕ್ಕೆ ಮನಸ್ಸಿಲ್ಲದಿದ್ದರೂ ನೀವು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.