Exodus 23:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಮೋಸದ ಕಾರ್ಯದಿಂದ ದೂರವಾಗಿರಬೇಕು. ನಿರಪರಾಧಿಯೂ ನೀತಿವಂತನೂ ಆಗಿರುವ ವ್ಯಕ್ತಿಗೆ ಮರಣದಂಡನೆ ವಿಧಿಸಲೇಬಾರದು. ಅಂಥ ದುಷ್ಟತ್ವವನ್ನು ಮಾಡಿದವನಿಗೆ ನಾನು ದಂಡನೆಯನ್ನು ವಿಧಿಸದೆ ಬಿಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿವಂತನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ.
Kannada BSI Bible 2016
ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿರಪರಾಧಿಯಾಗಿಯೂ ಸನ್ಮಾರ್ಗಸ್ಥನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇ ಬಾರದು; ಅಂಥ ದುಷ್ಟತ್ವವನ್ನು ಮಾಡಿದವನಿಗೆ ನಾನು ಶಿಕ್ಷೆಯನ್ನು ವಿಧಿಸದೆ ಬಿಡುವದಿಲ್ಲ.
Kannada Bible (KNCL) BSI 2016
ನಿರಪರಾಧಿಯೂ ನೀತಿವಂತನೂ ಆದ ವ್ಯಕ್ತಿಗೆ ಮರಣದಂಡನೆ ವಿಧಿಸಲೇಕೂಡದು; ಅಂಥ ದುಷ್ಕೃತ್ಯ ಮಾಡಿದವನಿಗೆ ನಾನು ಶಿಕ್ಷೆ ವಿಧಿಸದೆ ಬಿಡುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುಳ್ಳಿನ ವಿಷಯಗಳಿಂದ ನೀವು ದೂರವಿರಬೇಕು. ನಿರಪರಾಧಿ, ನೀತಿವಂತ ಆದ ವ್ಯಕ್ತಿಗೆ ಮರಣದಂಡನೆ ವಿಧಿಸಬಾರದು. ಅಂಥ ದುಷ್ಕೃತ್ಯ ಮಾಡಿದವನಿಗೆ ನಾನು ಶಿಕ್ಷೆ ವಿಧಿಸದೆ ಬಿಡುವುದಿಲ್ಲ.