Exodus 23:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಲಂಚವನ್ನು ತೆಗೆದುಕೊಳ್ಳಕೂಡದು; ಲಂಚವು ಕಣ್ಣುಳ್ಳವರನ್ನು ಕುರುಡರನ್ನಾಗಿ ಮಾಡುತ್ತದೆ; ನಿರಪರಾಧಿಗೆ ಅನ್ಯಾಯವನ್ನು ಬರಮಾಡುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.
Kannada BSI Bible 2016
ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಲಂಚವನ್ನು ತೆಗೆದುಕೊಳ್ಳಬಾರದು; ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಯಾದವನ ನ್ಯಾಯವನ್ನು ಕೆಡಿಸುತ್ತದೆ.
Kannada Bible (KNCL) BSI 2016
ಲಂಚವನ್ನು ತೆಗೆದುಕೊಳ್ಳಬಾರದು. ಲಂಚವು ಕಣ್ಣುಳ್ಳವರನ್ನು ಕುರುಡರನ್ನಾಗಿಸುತ್ತದೆ; ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ಕೆಡಿಸುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಲಂಚವನ್ನು ತೆಗೆದುಕೊಳ್ಳಬಾರದು. ಏಕೆಂದರೆ ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.