Exodus 24:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಮೋಶೆಗೆ, “ನೀನು ಆರೋನ, ನಾದ್ವಾ್, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿಬಂದು ದೂರದಿಂದ ನನ್ನನ್ನು ಆರಾಧಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಗೆ, “ನೀನು, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಯೆಹೋವನ ಬಳಿಗೆ ಬಂದು ದೂರದಲ್ಲಿ ನಿಂತು ಅಡ್ಡಬಿದ್ದು ಆರಾಧಿಸಬೇಕು.
Kannada BSI Bible 2016
ಆತನು ಮೋಶೆಗೆ--ನೀನೂ ಆರೋನನೂ ನಾದಾಬನೂ ಅಬೀಹೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಕರ್ತನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಗೆ - ನೀನೂ ಆರೋನ ನಾದಾಬ್ ಅಬೀಹೂ ಎಂಬವರೂ ಇಸ್ರಾಯೇಲ್ಯರ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಈ ಬೆಟ್ಟವನ್ನು ಹತ್ತಿ ಯೆಹೋವನ ಬಳಿಗೆ ಬಂದು ದೂರದಲ್ಲಿ ನಿಂತು ಅಡ್ಡಬೀಳಬೇಕು.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಮೋಶೆಗೆ, “ನೀನು, ಆರೋನ, ನಾದಾಬ್ ಹಾಗೂ ಅಬೀಹೂ ಮತ್ತು ಇಸ್ರಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಸರ್ವೇಶ್ವರನಾದ ನನ್ನ ಬಳಿಗೆ ಬಂದು ದೂರದಲ್ಲೆ ನಿಂತು ಅಡ್ಡಬೀಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯೆಹೋವ ದೇವರು ಮೋಶೆಗೆ, “ನೀನು, ಆರೋನ್, ನಾದಾಬ್, ಅಬೀಹೂ ಮತ್ತು ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಈ ಬೆಟ್ಟವನ್ನು ಹತ್ತಿ ಯೆಹೋವ ದೇವರಾದ ನನ್ನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.